ಫೀಲ್ಡಿಗಿಳಿದ ಬಿಬಿಎಂಪಿ ಅಧಿಕಾರಿಗಳು: ಹೊಟೇಲ್‌, ರೆಸ್ಟೋರೆಂಟ್‌ ಸಿಬ್ಬಂದಿಯ ಲಸಿಕೆ ಸರ್ಟಿಫಿಕೇಟ್‌ ತಪಾಸಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರೀ ಜನ ಸೇರುವ ಹಿನ್ನೆಲೆ ಬೆಂಗಳೂರಿನ ಹೊಟೇಲ್‌, ರೆಸ್ಟೋರೆಂಟ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಎರಡು ಡೋಸ್‌ ಲಸಿಕೆ ಕಡ್ಡಾಯ ಎಂಬ ಸೂಚನೆ ನೀಡಿದೆ. ಸರ್ಕಾರ ನೀಡಿದ ಸೂಚನೆ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ಫೀಲ್ಡಿಗಿಳಿದು ಬೆಂಗಳೂರಿನಲ್ಲಿರುವ ಹೋಟೆಲ್‌ ರೆಸ್ಟೋರೆಂಟ್‌ಗಳ ತಪಾಸಣೆಗಿಳಿದಿದ್ದಾರೆ.

ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ಪ್ರತಿಷ್ಠಿತಿ ಹೊಟೇಲ್‌, ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಎಲ್ಲಾ ಸಿಬ್ಬಂದಿಗಳು ಎರಡು ಡೋಸ್‌ ಲಸಿಕೆ ಪಡೆದಿದ್ದಾರೋ ಇಲ್ಲವೋ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಎಲ್ಲರ ವ್ಯಾಕ್ಸಿನ್‌ ಸರ್ಟಿಫಿಕೇಟ್‌ ಪರಿಶೀಲನೆ ನಡೆಸಿ, ಸೆಕೆಂಡ್‌ ಡೋಸ್‌ ಹಾಕಿಸಿಕೊಳ್ಳದವರಿಗೆ ಕೂಡಲೇ ಎರಡನೇ ಲಸಿಕೆ ತೆಗೆದುಕೊಳ್ಳುವಂತೆ ಸೂಚಿಸಲಾಗುತ್ತಿದೆ.

ಹೊಟೇಲ್‌ ರೆಸ್ಟೋರೆಂಟ್‌ಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿದ್ದು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತಡ ಹೊಟೇಲ್‌ ಮಾಲೀಕರಿಗೆ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!