January 30, 2026
Friday, January 30, 2026
spot_img

ಲೋಕಾ ದಾಳಿ ವೇಳೆ ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭ್ರಷ್ಟ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ದಾಳಿ ಮುಂದುವರೆಸಿದ್ದು 4 ಲಕ್ಷ ರೂ ಲಂಚ ಪಡೆವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಹೈಡ್ರಾಮಾ ಮಾಡಿದ್ದಾರೆ.

ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಇದರಲ್ಲಿ 1 ಲಕ್ಷ ರೂಪಾಯಿ ಈಗಾಗಲೇ ಪಡೆದುಕೊಂಡಿದ್ದರು. ಉಳಿದ 4 ಲಕ್ಷ ರೂಪಾಯಿ ಸ್ವೀಕರಿಸುವಾಗ ಟ್ರ್ಯಾಪ್ ಆಗಿದ್ದು, ಧನರಾಜ್ ಎಂಬುವವರು ನೀಡಿದ ದೂರಿನನ್ವಯ ಈ ಕಾರ್ಯಾಚರಣೆ ನಡೆಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !