ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಸಬ್‌ಇನ್ಸ್‌ಪೆಕ್ಟರ್ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಎಸ್‌ಐ ಭೂಪೇಂದ್ರ ಬಾಲಕಿಯನ್ನು ಪುಸಲಾಯಿಸಿ ಠಾಣೆಯ ಕೋಣೆಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ವಿಷಯ ಹಬ್ಬುತ್ತಿದ್ದಂತೆಯೇ ಗ್ರಾಮಸ್ಥರು ಠಾಣೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ, ಆರೋಪಿ ಭೂಪೇಂದ್ರರನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
https://twitter.com/i/status/1723239516280958999