January 31, 2026
Saturday, January 31, 2026
spot_img

ಲಂಚ ಸ್ವೀಕರಿಸುತ್ತಾ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಇನ್ಸ್​​ಪೆಕ್ಟರ್ ಸಸ್ಪೆಂಡ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲಂಚ ಸ್ವೀಕರಿಸುವಾಗ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಕೆ.ಪಿ.ಅಗ್ರಹಾರ ಠಾಣೆ ಇನ್ಸ್​ಪೆಕ್ಟರ್ ಗೋವಿಂದರಾಜು ಅವರನ್ನು ಅಮಾನತು ಮಾಡಲಾಗಿದೆ.

ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದು, ಲಂಚ ಪಡೆದ ಆರೋಪ ಸಂಬಂಧ ಇನ್ಸ್​ಪೆಕ್ಟರ್‌ನ ಸಸ್ಪೆಂಡ್ ಮಾಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಕೆಲ ದಿನಗಳ ಹಿಂದೆ ವಾರ್ಷಿಕ ಪೊಲೀಸ್ ಸಮ್ಮೇಳನದಲ್ಲಿ ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿತ್ತು. ಪದೇಪದೆ ಇಂತಹ ಘಟನೆಯಾದಾಗ ಸರ್ಕಾರಕ್ಕೆ ಹಾಗೂ ವೈಯುಕ್ತಿಕವಾಗಿ ನನಗೂ ಮುಜುಗರವಾಗಲಿದೆ. ಇಂತಹ ಘಟನೆಗಳು ಯಾಕೆ ನಡೆಯುತ್ತದೆ ಎಂಬುದರ ಬಗ್ಗೆ ಅಧ್ಯಯನ ಮಾಡೋಣ ಎಂದರು.

ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಸಹಾಯ ಮಾಡಲು 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಇನ್ಸ್​ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ.

ಪೋಸ್ಟಿಂಗ್ ಕೊಡಲು ಹಣ ಕೊಡುವ ವ್ಯವಸ್ಥೆ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ನನ್ನ ಹಂತದಲ್ಲಿ ಇಂತಹವುಗಳಿಗೆ ಅವಕಾಶ ನೀಡಲ್ಲ. ನಮಗೆ ಜವಾಬ್ದಾರಿ ಇದೆ. ಜನರಿಗೆ ನಾವು ಉತ್ತರ ಕೊಡಬೇಕು. ಜನ ನಮ್ಮನ್ನು ಗೆಲ್ಲಿಸಿದ್ದಾರೆ‌‌. ಆದಷ್ಟು ಈ ತರಹದ ಘಟನೆ ಆಗದ ರೀತಿ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !