ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್: ಬಳಕೆದಾರರ ಕೆಲ ಖಾತೆಗಳು ಅಮಾನತು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​ ಆಗಿದ್ದು, ಇದರ ಜೊತೆ ಕೆಲ​ ಖಾತೆಗಳು ಅಮಾನತುಗೊಂಡಿದೆ.
ಈ ಬಗ್ಗೆ ಇನ್​ಸ್ಟಾಗ್ರಾಮ್​ ಸ್ಪಷ್ಟನೆ ನೀಡಿದ್ದು, ಬಳಕೆದಾರರ ಖಾತೆಯಲ್ಲಿ ಕೆಲವು ತಾಂತ್ರಿಕ ದೋಷವಿರುವುದು ಕಂಡುಬಂದಿದೆ, ಈ ಬಗ್ಗೆ ಬಳಕೆದಾರರಲ್ಲಿ ಕ್ಷಮೆ ಯಾಚಿಸುತ್ತೇವೆ. ಇದನ್ನು ಸರಿಪಡಿಸುತ್ತಿದ್ದೇವೆ ಎಂದು ಹೇಳಿದೆ.
ಈ ತಾಂತ್ರಿಕ ದೋಷದಿಂದಾಗಿ ಖ್ಯಾತ ಫುಟ್ಬಾಲ್​ ತಾರೆ ಕ್ರಿಶ್ಚಿಯಾನೋ ರೊನಾಲ್ಡೋ ಅವರು ತಮ್ಮ 3 ಮಿಲಿಯನ್​ ಹಿಂಬಾಲಕರನ್ನು ಕಳೆದುಕೊಂಡಿದ್ದಾರೆ. ಇದಕ್ಕಿಂತ ಮೊದಲು ಇವರು 493 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದರು.​​ ಅಲ್ಲದೆ ಸ್ವತಃ ಇನ್​ಸ್ಟಾಗ್ರಾಮ್ ತನ್ನ ಒಂದು ಮಿಲಿಯನ್​​​ ಹಿಂಬಾಲಕರನ್ನು ಕಳೆದುಕೊಂಡಿದೆ ಎಂದು ಹೇಳಲಾಗಿದೆ. ಇಂದು ಬೆಳಿಗ್ಗೆಯಿಂದ ಈ ಸಮಸ್ಯೆ ಕಂಡು ಬಂದಿದ್ದು, ಇನ್​ಸ್ಟಾಗ್ರಾಮ್ ದೋಷವನ್ನು ಸರಿಪಡಿಸಲಾಗುತ್ತಿದೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!