ಕಾರ್ಖಾನೆಗಳಲ್ಲಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಿ: ಸಚಿವ ಕೆ.ಹೆಚ್ ಮುನಿಯಪ್ಪ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕಡ್ಡಾಯವಾಗಿ ಕ್ರಮವಹಿಸಿ ಎಂದು ಆಹಾರ

ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು, ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ 100 ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು, ಸಾರ್ವಜನಿಕರ ದೂರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!