ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಗಾವತಿ ನಗರದ ಮಹಾರಾಣಾ ಪ್ರತಾಪ್ ಸರ್ಕಲ್‌ನಿಂದ ಜುಲೈ ನಗರ ಕ್ರಾಸ್‌ವರೆಗೂ ತಿರುಪತಿ, ಅಯೋಧ್ಯೆಯಲ್ಲಿರುವಂತೆ ವಿದ್ಯುತ್ ಕಂಬಗಳನ್ನು ಹಾಕಿದ್ದಕ್ಕೆ ಎಸ್‌ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.
ಅಯೋಧ್ಯೆ, ತಿರುಪತಿಯ ಮಾದರಿಯಲ್ಲಿ ಗಂಗಾವತಿ ಅಂಜನಾದ್ರಿ ಅಭಿವೃದ್ಧಿ ಆಗಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ. ಆದರೆ ಅದೇ ಮಾದರಿಯಲ್ಲಿ ನಗರದ ಬೀದಿ ದೀಪದ ಕಂಬ ಅಳವಡಿಕೆಗೆ ಎಸ್‌ಡಿಪಿಐ ವಿರೋಧ ವ್ಯಕ್ತಪಡಿಸಿದೆ. ಇದು ಕೇವಲ ಒಂದು ಧರ್ಮದ ಸಂಕೇತವಾಗಿದೆ. ಇದರಿಂದ ಗಂಗಾವತಿ ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಆಗುತ್ತದೆ ಎಂದು ಆರೋಪಿಸಿದೆ. ಅದನ್ನು ತೆಗೆದುಹಾಕಬೇಕು ಅಥವಾ ಡಿಸೈನ್ ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದೆ.