ಬೆಂಗಳೂರಿನ ರಾಜ ಕಾಲುವೆಗಳಲ್ಲಿ ಪ್ರವಾಹ ಎಚ್ಚರಿಕೆ ಸಂವೇದಕ ಅಳವಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಗರದಲ್ಲಿ ಮಳೆಯಿಂದಾಗಿ ಘಟಿಸುವ ಪ್ರವಾಹ, ಇನ್ನಿತರ ತುರ್ತು ಸಂದರ್ಭಗಳ ನಿರ್ವಹಣೆಗಾಗಿ ರಾಜಕಾಲುವೆಗಳಲ್ಲಿ ಹೊಸ ತಂತ್ರಜ್ಞಾನದ ಅಳವಡಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಮಾಹಿತಿ ನೀಡಿದೆ.

ರಾಜಕಾಲುವೆಗಳಲ್ಲಿ ಹೊಸ ತಂತ್ರಜ್ಞಾನದ ಬಳಸಿಕೊಂಡು 124 ಕಡೆ ನೀರಿನ ಮಟ್ಟ ಅಳೆಯುವ ಸಂವೇದಕಗಳನ್ನು ಕೆಎಸ್‌ಎನ್‌ಡಿಎಮ್‌ಸಿ ವತಿಯಿಂದ ಅಳವಡಿಸಲಾಗಿದೆ. ಇನ್ನೂ ಪ್ರತಿಯೊಂದು ಸೆನ್ಸಾರ್ ಯಂತ್ರಕ್ಕೂ ಸೋಲಾರ್ ಅಳವಡಿಕೆ ಮಾಡಲಾಗಿದೆ.

ಈ ತಂತ್ರಜ್ಞಾನ ಅಳವಡಿಕೆಯಿಂದ ನಿತ್ಯ ಅಂತರ್ಜಾಲದ ಮೂಲಕ ಕೆಎಸ್‌ಎನ್‌ಡಿಎಂಸಿ ನಿಯಂತ್ರಣ ಕೊಠಡಿಗೆ ಕೂಡಲೇ ಮಾಹಿತಿ ತಿಳಿಯಲಿದೆ. ಅವರು ಪಾಲಿಕೆಯ ಇಂಟಿಗ್ರೇಟೆಡ್ ಕಮಾಂಡಿಂಗ್ ಕಂಟ್ರೋಲ್ ಸೆಂಟರ್ ಗೆ ಮಾಹಿತಿ ರವಾನೆ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂವೇದಕಗಳು ಸೌರಶಕ್ತಿಯಿಂದ ಚಾಲಿತವಾಗಿದ್ದು, ಅಂತರ್ಜಾಲದ ಮೂಲಕ ಕೆಎಸ್‌ಎನ್‌ಡಿಎಮ್‌ಸಿ ನಿಯಂತ್ರಣ ಕೊಠಡಿಗೆ ಎಚ್ಚರಿಕೆಗಳನ್ನು ಕಳುಹಿಸುತ್ತವೆ. ಏಕಕಾಲದಲ್ಲಿ ಬಿಬಿಎಂಪಿಯ ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್ ಗೂ ಎಚ್ಚರಿಕೆ ನೀಡಲಾಗಿದೆ.

ಹಸಿರು, ನೀಲಿ, ಕೆಂಪು ಮತ್ತು ಕಪ್ಪು ಸೂಚಕಗಳ ಮೂಲಕ ರಾಜ ಕಾಲುವೆಗಳಲ್ಲಿ ನೀರಿನ ಹರಿವಿನ ಮಟ್ಟವನ್ನು ತೋರಿಸುತ್ತವೆ. ಹಸಿರು ಮತ್ತು ನೀಲಿ ಬಣ್ಣದಲ್ಲಿದ್ದರೆ ಅಪಾಯವಿಲ್ಲ. ಕೆಂಪು ಬಣ್ಣದಲ್ಲಿದ್ದರೆ ಅಪಾಯ ಎಂದರ್ಥ ಹಾಗೂ ಕಪ್ಪು ಬಣ್ಣಕ್ಕೆ ತಿರುಗಿದರೆ ಪ್ರವಾಹದ ಎಚ್ಚರಿಕೆ ನೀಡುತ್ತದೆ.ಇದರೊಂದಿಗೆ, ಅಧಿಕಾರಿಗಳು ಪ್ರವಾಹದಿಂದ ಉಂಟಾಗುವ ಅನಾಹುತಗಳನ್ನು ತಪ್ಪಿಸುವ ಮೂಲಕ ಪೀಡಿತ ಪ್ರದೇಶದ ನಿವಾಸಿಗಳನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!