ಅಯೋಧ್ಯೆಯಲ್ಲಿ ಕನ್ನಡ ಸೇರಿ 28 ಭಾಷೆಗಳಲ್ಲಿ ಸೂಚನಾ ಫಲಕ ಅಳವಡಿಕೆ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದು ಜನವರಿ 22 ರಂದು ಪ್ರಧಾನಿ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ. ಮಂದಿರದ ಕಾರ್ಯಗಳು ಇನ್ನು ನಡೆಯುತ್ತಿದ್ದು ಕಾರ್ಯಕ್ರಮಕ್ಕೆ ಅಧಿಕ ಸಂಖ್ಯೆಯಲ್ಲಿ ಎಲ್ಲ ಭಾಷೆಯ ರಾಮಭಕ್ತರು ಅಯೋಧ್ಯೆಗೆ ಆಗಮಿಸಲಿದ್ದಾರೆ.

ಇದಕ್ಕಾಗಿ ಕನ್ನಡ ಸೇರಿದಂತೆ ಸಂವಿಧಾನದ 8ನೇ ಅನುಸೂಚಿಯಲ್ಲಿನ ಭಾಷೆಗಳು ಮತ್ತು ವಿಶ್ವಸಂಸ್ಥೆಯ 6 ಅಧಿಕೃತ ಭಾಷೆಗಳಲ್ಲಿ ಸೂಚನಾ ಫಲಕಗಳನ್ನ ಅಳವಡಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಅಯೋಧ್ಯೆಯ ರಾಮಮಂದಿರ ನೋಡಲು ಬರುವ ದೇಶದ ಎಲ್ಲ ಜನರ ಅನುಕೂಲಕ್ಕಾಗಿ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಸೂಚನಾ ಫಲಕಗಳನ್ನು ಆಳವಡಿಸಲಾಗುತ್ತಿದೆ.

ಸಂವಿಧಾನದ 8ನೇ ಅನುಸೂಚಿಯಲ್ಲಿರುವ 22 ಭಾಷೆಗಳು ಹಾಗೂ ಹಾಗೂ ವಿಶ್ವಸಂಸ್ಥೆಯ 6 ಅಧಿಕೃತ ಭಾಷೆಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲು ಈಗಾಗಲೇ ನಿರ್ಧರಿಸಲಾಗಿದೆ. ಇದರಿಂದ ದೇಶದ ವಿವಿಧ ಭಾಗಗಳಿಂದ ಬರುವ ರಾಮಭಕ್ತರಿಗೆ ಇದು ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದೇಶದ ವಿವಿಧ ಭಾಗಗಳಿಂದ ಬಹಳಷ್ಟು ಜನರು ತೆರಳಲಿದ್ದಾರೆ. ಈ ವೇಳೆ ಕೆಲವರಿಗೆ ಅಲ್ಲಿನ ಹಿಂದಿ ಭಾಷೆಯ ತಿಳಿದಿರುವುದಿಲ್ಲ. ಹೀಗಾಗಿ ರಾಮ ಭಕ್ತರಿಗೆ ಅನುಕೂಲ ಆಗಲಿ ಎಂದು 22 ಭಾಷೆಗಳ ಜೊತೆಗೆ ವಿಶ್ವಸಂಸ್ಥೆಯ 6 ಭಾಷೆಗಳಲ್ಲಿ ಸೂಚನೆ ಫಲಕಗಳನ್ನು ಅಳವಡಿಸಲು ಸಿಬ್ಬಂದಿ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!