ಭಜನೆ ಕುರಿತು ಅವಹೇಳನ: ಅರಣ್ಯಾಧಿಕಾರಿ ವಿರುದ್ಧ ಪ್ರತಿಭಟನೆ

ಹೊಸದಿಗಂತ ವರದಿ, ಪುತ್ತೂರು:
ಸರಕಾರಿ ಉದ್ಯೋಗದಲ್ಲಿದ್ದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಧರ್ಮ ನಿಂದನೆ ಮಾಡಿದ ಆರೋಪದ ಮೇಲೆ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಎಂಬವರ ವಿರುದ್ಧ ವಿಹಿಂಪ- ಬಜರಂಗದಳದ ಕಾರ್ಯಕರ್ತರು ನಗರದ ಅರಣ್ಯ ಇಲಾಖೆ ಕಚೇರಿ ಬಳಿ ಬುಧವಾರ ಅನಿರ್ಧಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.
ಕಡಬ ತಾಲೂಕಿನ ಕೊಯಿಲ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಅವರು ಭಜನೆಯ ಕುರಿತು ಹಾಗೂ ಹಿಂದೂ ಧಾರ್ಮಿಕ ಆಚರಣೆಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಂಬದ್ಧ ಬರಹಗಳನ್ನು ಬರೆದು ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಭಜನೆಯೊಂದಿಗೆ ಪ್ರತಿಭಟನೆಯನ್ನು ಆರಂಭಗೊಳಿಸಿದರು.
ಈ ಸಂದರ್ಭ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಂಜೀವ ಕಾಣಿಯೂರು ವಿರುದ್ಧ ಕ್ರಮದ ಭರವಸೆ ನೀಡುವವರೆಗೆ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಪಟ್ಟು ಹಿಡಿದು ಕುಳಿತಿದ್ದಾರೆ. ಮಧ್ಯಾಹ್ನ ಪ್ರತಿಭಟನಾ ಸ್ಥಳದಲ್ಲೇ ಊಟ ಮಾಡುವ ಮೂಲಕ ಪ್ರತಿಭಟನೆ ಮುಂದುವರೆಸಿದ್ದಾರೆ.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಪ್ರಸಾರ ಪ್ರಚಾರ ಪ್ರಮುಖ್ ಶ್ರೀಧರ ತೆಂಕಿಲ, ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ ಕುಂಜೂರುಪಂಜ, ಪ್ರಮುಖರಾದ ಹರೀಶ್ ದೋಳ್ಪಾಡಿ, ಲತೇಶ್ ಗುಂಡ್ಯ, ಜಿತೇಶ್, ರವಿ ಕುಮಾರ್, ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!