ಅಂಬೇಡ್ಕರ್ ಪ್ರತಿಮೆಗೆ ಅವಮಾನ: ಅಪರಾಧಿಗಳ ಬಂಧನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಹೊಸದಿಗಂತ ವರದಿ, ಕಲಬುರಗಿ :

ನಗರದ ಹೊರವಲಯದ ಕೋಟನೂರು ಬಡಾವಣೆಯಲ್ಲಿ ಸೋಮವಾರ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ಕೂಡಲೇ ತಪ್ಪು ಮಾಡಿದ ಅಪರಾಧಿಗಳನ್ನು ಬಂಧಿಸಲು ಈಗಾಗಲೇ ಪೋಲಿಸರಿಗೆ ಸೂಚನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಘಟನೆ ಕುರಿತು ತಮ್ಮ ಪೆಸಬುಕ್ ಖಾತೆಯಲ್ಲಿ ಬರೆದುಕೊಂಡ ಅವರು, ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರ ಸಭೆಗಾಗಿ ಆಗಮಿಸಿದ್ದ ಕಲಬುರಗಿ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೂಡಲೇ ಕಲಬುರ್ಗಿಗೆ ವಾಪಸ್ ಕಳುಹಿಸಿ, ಈ ಪ್ರಕರಣದ ಕುರಿತು ತೀವ್ರಗತಿಯಲ್ಲಿ ತನಿಖೆ ನಡೆಸಿ ಆದಷ್ಟು ಶೀಘ್ರವಾಗಿ ಅಪರಾಧಿಗಳನ್ನು ಬಂಧಿಸುವಂತೆ ಈಗಾಗಲೇ ಸೂಚಿಸಿದ್ದೇನೆ ಎಂದರು

ಸಮಾನತೆಗಾಗಿ ತಮ್ಮ ಜೀವನವನ್ನೇ ಸವೆಸಿ ಇಡೀ ದೇಶದ ಶೋಷಿತ ಸಮುದಾಯಗಳಿಗೆ ಬದುಕುವ ಹಕ್ಕನ್ನು ಕೊಟ್ಟ ಮಹಾತ್ಮನಿಗೂ ಅಪಮಾನ ಮಾಡಿದವರಿಗೆ ತಕ್ಕ ಶಿಕ್ಷೆ ನೀಡುವ ಕೆಲಸವನ್ನು ನಾವು ಖಂಡಿತ ಮಾಡಲಿದ್ದೇವೆ.ಈ ಸಂದರ್ಭದಲ್ಲಿ ಯಾರೂ ಕೂಡ ಉದ್ವೇಗಕ್ಕೆ ಒಳಗಾಗದೇ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ತಮ್ಮೆಲ್ಲರಿಗೂ ಕಳಕಳಿಯಿಂದ ಮನವಿ ಮಾಡುತ್ತೇನೆ ಎಂದು ಕೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!