ಕನ್ನಡಿಗರಿಗೆ ಅವಮಾನ: ಸಿಂಗರ್‌ ಸೋನು ನಿಗಮ್‌ ವಿರುದ್ಧ ವ್ಯಾಪಕ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್‌ ಉಗ್ರರ ದಾಳಿಗೆ ಹೋಲಿಸಿ ಅವಹೇಳನಕಾರಿಯಾಗಿ ಮಾತನಾಡಿದ ಗಾಯಕ ಸೋನು ನಿಗಮ್‌ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ನಡುವಲ್ಲೇ ಗಾಯಕನಿಗೆ ಸಮನ್ಸ್ ಜಾರಿ ಮಾಡಲು ಪೊಲೀಸರು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರಿನ ಕಾಲೇಜು ಒಂದರಲ್ಲಿ ನಡೆದ ಈವೆಂಟ್ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್ ಕನ್ನಡ ಹಾಡು ವಿನಂತಿ ಮಾಡಿದಕ್ಕೆ ಪಹಲ್ಲಾಮ್‌ನಲ್ಲಿ ಆಗಿದ್ಯಲ್ಲ. ಅದಕ್ಕೆ ಇದೇ ಕಾರಣ ಎಂದಿದ್ದರು. ಈ ಹೇಳಿಕೆ ಬೆನ್ನಲ್ಲೇ ಸೋನು ನಿಗಮ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ತನಿಖಾ ಅಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

ಆವಲಹಳ್ಳಿ ಪೊಲೀಸರು ಗಾಯಕನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 351(1) (ಕ್ರಿಮಿನಲ್ ಬೆದರಿಕೆ), 352 (ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕ ಅವಮಾನ) ಮತ್ತು 353 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮರಾಜ್ ಎ ಅವರು ದೂರು ನೀಡಿದ್ದು, ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ನಡೆದ ಸಂಗೀತ ಕಚೇರಿಯಲ್ಲಿ ಸೋನು ನಿಗಮ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.ದೂರು ದಾಖಲಾದ ಬೆನ್ನಲ್ಲೇ ಸೋನು ಅವರು ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!