ರಾಜ್ಯದಲ್ಲಿ ಗುಪ್ತಚರ ವ್ಯವಸ್ಥೆ ಸಂಪೂರ್ಣ ವಿಫಲ: ಹೆಚ್.ಡಿ.ಕುಮಾರಸ್ವಾಮಿ ಗರಂ

ಹೊಸದಿಗಂತ ಆನ್‌ಲೈನ್ ಡೆಸ್ಕ್

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಗುಪ್ತಚರ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಂದು ಆರೋಪಿಸಿದರು. ಹಿಜಾಬ್, ಕೇಸರಿ ಶಾಲು ಗಲಾಟೆ ಇಡೀ ರಾಜ್ಯಕ್ಕೆ ವ್ಯವಸ್ಥಿತವಾಗಿ ಹಬ್ಬಿದಾಗಲೇ ಅಮಾಯಕ ಮಕ್ಕಳನ್ನು ಬಲಿ ನೀಡುವ ಹುನ್ನಾರ ನಡೆದಿದೆ ಎಂಬ ಸಂಶಯ ಉಂಟಾಗಿತ್ತು. ಶಿವಮೊಗ್ಗದಲ್ಲಿ ನಡೆದ ಕೊಲೆಯೂ ಈ ಷಡ್ಯಂತ್ರದ ಒಂದು ಭಾಗ ಎಂಬ ಅನುಮಾನವಿದೆ ಎಂದು ಅವರು ಹೇಳಿದರು. ಈಗ ಶಿವಮೊಗ್ಗದಲ್ಲಿ ಅಶಾಂತಿ ಉಂಟಾಗಿದೆ. ಸರಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಕೃತ್ಯಗಳಿಗೆ ಸೂಕ್ತ ಕಡಿವಾಣ ಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!