ದುರ್ಗಾ ಮಂಟಪ ಕಟ್ಟಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ಹಲವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದುರ್ಗಾ ಮಂಟಪ ಕಟ್ಟದ್ದಕ್ಕೆ ದಲಿತರ ಮೇಲೆ ಪ್ರಬಲ ಗುಂಪುಗಳು ದಾಳಿ ನಡೆಸಿರುವ ಘಟನೆ ಮಧ್ಯಪ್ರದೇಶದ ಅಗರ್ ಜಿಲ್ಲೆಯ ಕಂಕರ್ ಎಂಬ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಎರಡು ಗುಂಪುಗಳ ನಡುವೆ ಘರ್ಷಣೆ ತೀವ್ರಗೊಂಡಿದ್ದರಿಂದ ಪರಸ್ಪರ ದೊಣ್ಣೆಗಳಿಂದ ಹೊಡೆದಾಡಿದ್ದಾರೆ. ಭಾನುವಾರ ನಡೆದ ಘರ್ಷಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ವರದಿ ಪ್ರಕಾರ, ನವರಾತ್ರಿ ಹಬ್ಬಕ್ಕಾಗಿ ಕಂಕರ್ ಗ್ರಾಮದಲ್ಲಿ ದಲಿತರು ದುರ್ಗಾ ಮಾತೆಯ ಮಂಟಪ ನಿರ್ಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ.ದೇವರನ್ನು ಪ್ರತಿಷ್ಠಾಪಿಸಿದ್ದಕ್ಕಾಗಿ ದಲಿತರ ಮೇಲೆ ಅದೇ ಗ್ರಾಮದ ಪ್ರಬಲ ವರ್ಗದ ಕೆಲವರು ಹಲ್ಲೆ ನಡೆಸಿದ್ದಾರೆ. ಇಬ್ಬರ ನಡುವೆ ಜಟಾಪಟಿ ಏರ್ಪಟ್ಟು ಕೈಗೆ ಸಿಕ್ಕ ದೊಣ್ಣೆಗಳಿಂದ ಪರಸ್ಪರ ತಳ್ಳಿಕೊಂಡು ಹೊಡೆದಿದ್ದಾರೆ. ಈ ಘಟನೆಯ ಬಗ್ಗೆ ದೂರು ಸ್ವೀಕರಿಸಿದ್ದೇವೆ ಮತ್ತು ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊಗಳ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಇನ್ನೂ ಹೊಡೆದಾಟದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಲೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಊರಿನ ಜನರ ಮಾಹಿತಿ ಮೇರೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!