ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತರಧರ್ಮೀಯ ವಿವಾಹವಾಗುವುದರಲ್ಲಿ ತಪ್ಪಿಲ್ಲ. ಆದರೆ, ಸುಳ್ಳು ಗುರುತಿನ ಮೂಲಕ ಬಲವಂತವಾಗಿ ಮತಾಂತರ ಮಾಡಿ ಮದುವೆಯಾಗಿ ವಂಚಿಸುವ ಪ್ರಕರಣಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್, ‘ಲವ್ ಜಿಹಾದ್’ನ ನೈಜತೆಯ ಬಗ್ಗೆ ಸುಪ್ರೀಂ ಕೋರ್ಟ್ ಮತ್ತು ಕೇರಳ ಹೈಕೋರ್ಟ್ ಅವಲೋಕನ ಮಾಡಿವೆ. ಬಲವಂತದ ಮತಾಂತರ ಮತ್ತು ‘ಲವ್ ಜಿಹಾದ್’ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ ಎಂದು ಹೇಳಿದರು.
ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಮೊದಲಿಗೆ ಮದುವೆಯಾಗಿ, ಮಕ್ಕಳು ಜನಿಸಿದ ನಂತರ ಅವರನ್ನು ಬಿಟ್ಟುಬಿಡುವ ಘಟನೆಗಳು ಹೆಚ್ಚುತ್ತಿವೆ. ಅಂತರಧರ್ಮೀಯ ವಿವಾಹವಾಗುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಬಲವಂತದ ಮತಾಂತರ ಪ್ರಕರಣಗಳು ಗಂಭೀರವಾಗಿವೆ. ಇವುಗಳನ್ನು ತಡೆಯುವ ಅಗತ್ಯವಿದೆ ಎಂದು ತಿಳಿಸಿದರು.
ಲವ್ ಜಿಹಾದ್ ಮೂಲಕ ಅನ್ಯಾಯಕ್ಕೆ ಒಳಗಾಗಿರುವ ಹಾಗೂ ಬಲವಂತವಾಗಿ ಮತಾಂತರಗೊಂಡಿರುವ ಪ್ರಕರಣಗಳ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸೂಚಿಸಿದೆ ಎಂದು ಫಡ್ನವಿಸ್ ತಿಳಿಸಿದ್ದಾರೆ.