ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (brij bhushan sharan singh) ಅವರಿಗೆ ದೆಹಲಿ ಕೋರ್ಟ್ ಇಂದು (ಜು.18) ಮಧ್ಯಂತರ ಜಾಮೀನು ನೀಡಿದೆ.
ತಲಾ 25,000 ರೂಪಾಯಿ ಬಾಂಡ್ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.
ಡಬ್ಲ್ಯುಎಫ್‌ಐನ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್‌ಗೂ ಮಧ್ಯಂತರ ಜಾಮೀನು ನೀಡಲಾಗಿದೆ. ಈ ಜಾಮೀನು ಕುರಿತು ನ್ಯಾಯಾಲಯವು ಗುರುವಾರ ವಿಚಾರಣೆ ನಡೆಸಲಿದೆ.
ಕೋರ್ಟ್ನಲ್ಲಿ ಬ್ರಿಜ್ ಭೂಷಣ್ ಸಿಂಗ್ ಪರ ವಾದ ಮಾಡಿದ ವಕೀಲರು, ಸುಮಾರು ಆರು ಮಹಿಳಾ ಕುಸ್ತಿಪಟುಗಳು ಬ್ರಿಜ್ ಭೂಷಣ್ ಸಿಂಗ್ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಜೂನ್ 2 ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಗಳ ಆಧಾರದ ಮೇಲೆ ಎರಡು ಎಫ್ಐಆರ್ ಮತ್ತು 10 ದೂರುಗಳನ್ನು ದಾಖಲಿಸಿದ್ದಾರೆ. ಈ ದೂರಿನಲ್ಲಿ ಕುಸ್ತಿಪಟುಗಳ ಎದೆಯ ಮೇಲೆ ಕೈ ಹಾಕುವುದು, ಬೆನ್ನು ಸವರುವುದು ಮತ್ತು ಅವರನ್ನು ಹಿಂಬಾಲಿಸುವುದು ಇತ್ಯಾದಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ತಿಳಿಸಿದ್ದಾರೆ.