ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ-2 ಸರ್ಕಾರದ ಕೊನೆಯ ಬಜೆಟ್‌ಗೆ ದಿನಾಂಕ ನಿಗದಿಯಾಗಿದೆ. ಫೆ.1ರಂದು ಮಧ್ಯಂತರ ಬಜೆಟ್ ಹಾಗೂ ಜ.೩೧ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ.
ಜ.31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್‌ನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುತ್ತಾರೆ. ಮರುದಿನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ.
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆಗಳು ಇರುವ ಕಾರಣ ಅದರ ಮುಂಚಿನ ಬಜೆಟ್‌ನ್ನು ಮಧ್ಯಂತರ ಬಜೆಟ್ ಎನ್ನಲಾಗುತ್ತದೆ. ಚುನಾವಣೆ ನಂತರ ಹೊಸ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಜುಲೈ ನಂತರ ಪೂರ್ಣಪ್ರಮಾಣದ ಬಜೆಟ್ ಮಂಡನೆಯಾಗಲಿದೆ.