March 14, 2026
Saturday, March 14, 2026
spot_img

ಪರಿಶಿಷ್ಟ ಸಮುದಾಯದಲ್ಲಿ ಒಳಮೀಸಲಾತಿ: ಮಾ. 27ರ ಮಹತ್ವದ ಸಭೆ ಬಳಿಕ ಸರ್ಕಾರ ಅಂತಿಮ ತೀರ್ಮಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪರಿಶಿಷ್ಟ ಸಮುದಾಯದಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತು ಇದೇ 27ರಂದು ಮಹತ್ವದ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆಯಲ್ಲಿಂದು ಹೇಳಿದ್ದಾರೆ.

ಅಂದು ನಡೆಯಲಿರುವ ಸಭೆಯಲ್ಲಿ ಒಳಮೀಸಲಾತಿ ಕುರಿತು ಸುದೀರ್ಘವಾಗಿ ಚರ್ಚಿಸಿ, ಸರ್ಕಾರ ಅಂತಿಮ ತೀರ್ಮಾನ ಪ್ರಕಟಿಸಲಿದೆ ಎಂದು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಎದುರಾಗಿರುವ ಹಿನ್ನೆಲೆಯಲ್ಲಿ ಎಲ್ ಪಿಜಿ ಸಿಲಿಂಡರ್ ಸರಬರಾಜು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಕೇಂದ್ರದಿಂದ ಸಿಲಿಂಡರ್ ಬಂದ ತಕ್ಷಣ ರಾಜ್ಯ ಸರ್ಕಾರವು ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಎರಡು ಸಭೆಗಳನ್ನು ನಡೆಸಿದ್ದು, ಕೇಂದ್ರಕ್ಕೆ ಪತ್ರವನ್ನು ಬರೆಯಲಾಗಿದೆ ಎಂದು ಹೇಳಿದರು.


ಕೃಷ್ಣಾ ಮೇಲ್ದಂಡೆ ಯೋಜನೆಯ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣಾ ಕಾರ್ಯವನ್ನು ಇಂದಿನಿಂದ ಪ್ರಾರಂಭಿಸಲಾಗುತ್ತಿದ್ದು, ಸಂತ್ರಸ್ತರೆಲ್ಲರಿಗೂ ಮೂರ್ನಾಲ್ಕು ವರ್ಷಗಳ ಅವಧಿಯಲ್ಲಿ ಸಂಪೂರ್ಣ ಪರಿಹಾರ ನೀಡಲಾಗುವುದು ಎಂದರು. ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದೂ ಕೂಡ ಅವರು ತಿಳಿಸಿದರು. ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭೆಯ ಉಪಚುನಾವಣೆಗೆ ವಾರದೊಳಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಉಪಚುನಾವಣೆ ಎದುರಿಸಲು ಪಕ್ಷವು ಕೂಡ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !