ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬಿ.ಎಸ್.ಯಡಿಯೂರಪ್ಪ ಕುಟುಂಬ ಮತ್ತು ಯತ್ನಾಳ್ ಬಣದ ನಡುವಿನ ಆಂತರಿಕ ಕಲಹದ ಬಗ್ಗೆ ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಇತಿಹಾಸದ ಅನೇಕ ಪುಟಗಳನ್ನ ತಿರುವಿ ನೋಡಿದಾಗ ತಿಳಿಯುತ್ತೆ ಹೊರಗಿನವರು ವೈರಿಗಳು ಯಾರು ಇರುವುದಿಲ್ಲ.ಅವರವರಲ್ಲಿ ವೈರಿಗಳು ಹುಟ್ಟಿ ಸರ್ವನಾಶಕ್ಕೆ ಕಾರಣರಾಗಿದ್ದಾರೆ. ವಿನಾಶಕಾಲೇ ವಿಪರೀತ ಬುದ್ಧಿ ಎಂಬ ಮಾತು ಆಗಾಗ ಮರುಕಳಿಸುವ ಸನ್ನಿವೇಶವನ್ನು ಕಾಣುತ್ತೇವೆ ಎಂದು ಶ್ರೀಗಳು ಹೇಳಿದ್ದಾರೆ.
ವಿಜಯೇಂದ್ರ ನಾಯಕತ್ವಕ್ಕೆ ಕೆಲವರು ಅಪಸ್ವರ ಎತ್ತುತ್ತಿರುವುದು ಸರಿಯಲ್ಲ. ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವ ಬದಲು ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳುವುದು ಒಳಿತು. ಭವಿಷ್ಯದಲ್ಲಿ ಅಧಿಕಾರ ಹಿಡಿಯಬೇಕೆಂದರೆ ಎಲ್ಲ ಸದಸ್ಯರು ಒಟ್ಟಾಗಿ ಕೆಲಸ ಮಾಡುವುದು ಅಗತ್ಯವಿದೆ ಎಂದು ಕಿವಿಮಾತು ಹೇಳಿದರು.