Monday, August 8, 2022

Latest Posts

ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕೇಂದ್ರ ದಿಂದ ಅನುಮೋದನೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರವು ಸುಮಾರು 1,000 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಕೇಂದ್ರ ಸರ್ಕಾರ 250 ಕೋಟಿ ರೂ. ನೀಡಿದೆ. 377 ಹೆಕ್ಟೇರ್‌ಗಿಂತ ಹೆಚ್ಚಿನ ಭೂಮಿಯನ್ನು ನೀಡಲಾಗಿದೆ. ಇಲ್ಲಿ ಏರ್​ಪೋರ್ಟ್​ ನಿರ್ಮಿಸುವ ನಮ್ಮ ಪ್ರಸ್ತಾವನೆಗೆ ಕೇಂದ್ರ ಅನುಮೋದಿಸಿದೆ ಎಂದು ಸಿಎಂ ಯೋಗಿ ಹೇಳಿದರು.
ವಿವಿಧ ದೇಶಗಳಲ್ಲಿ ಭಾರತ ಮೂಲದ ಜನರು ವಾಸಿಸುತ್ತಿದ್ದು, ಅವರು ಅಯೋಧ್ಯೆಗೆ ಭೇಟಿ ನೀಡಲು ಬಯಸುತ್ತಾರೆ. ಇದರಿಂದ ಇಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದರೆ ಅವರಿಗೆ ಬಹಳ ಅನುಕೂಲವಾಗುತ್ತದೆ ಎಂದು ಯೋಗಿ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss