February 12, 2026
Thursday, February 12, 2026
spot_img

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ಸಾವಿರ ದಿನಗಳಾಗುತ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾಹಿತಿ ನೀಡಿದ್ದಾರೆ. ಫೆಬ್ರವರಿ13 ಹಾಗೂ 14ರಂದು ಭಾರತೀಯ ವಿಜ್ಞಾನ ಸಂಸ್ಥೆಯ ಜೆ.ಜೆ. ಟಾಟಾ ಸಭಾಂಗಣದಲ್ಲಿ ಎರಡು ದಿನಗಳ ಸಮ್ಮೇಳನ ನಡೆಯಲಿದ್ದು, ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಭಾರತದಲ್ಲಿ 6,628 ಅಣೆಕಟ್ಟುಗಳಿದ್ದು, ಕರ್ನಾಟಕ 231 ಅಣೆಕಟ್ಟುಗಳನ್ನು ಹೊಂದಿದೆ.

ಅಣೆಕಟ್ಟುಗಳ ಸುರಕ್ಷತೆ ಬಗ್ಗೆ ದೇಶದೆಲ್ಲೆಡೆ ಚರ್ಚೆಯಾಗುತ್ತಿದೆ. ಒಂದೂವರೆ ವರ್ಷಗಳ ಹಿಂದೆ ಜೈಪುರದಲ್ಲಿ ಈ ಸಮ್ಮೇಳನ ಆಯೋಜಿಸಲಾಗಿತ್ತು. ಜಲಶಕ್ತಿ ಸಚಿವಾಲಯ ಸಹಯೋಗದಲ್ಲಿ ಕರ್ನಾಟಕ ಸರ್ಕಾರ ಈ ಸಮ್ಮೇಳನ ಆಯೋಜಿಸುತ್ತಿದೆ. ಇದಕ್ಕೆ ಕೇಂದ್ರ ಜಲಶಕ್ತಿ ಆಯೋಗವು ಅನೇಕ ಸಲಹೆ ಮಾರ್ಗದರ್ಶನ ನೀಡಿದೆ ಎಂದು ಮಾಹಿತಿ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !