ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೊನ್ನೆಯಷ್ಟೇ ಸ್ನೇಹಿತರ ಜೊತೆ ಮೈಸೂರಿಗೆ ತೆರಳಿದ್ದು, ದಸರಾ ಮುಗಿಸಿ ಬೆಂಗಳೂರಿಗೆ ವಾಪಾಸಾಗಿದ್ದಾರೆ. ನೆಲಮಂಗಲದಲ್ಲಿನ ಅರಿಶಿಣಕುಂಟೆಯ ಆದರ್ಶನಗರದ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎಷ್ಟು ಸಮಯವಾದರೂ ಧನಲಕ್ಷ್ಮೀ ಕರೆ ಸ್ವೀಕರಿಸದ ಕಾರಣ ಪೋಷಕರು ಮನೆಗೆ ಬಂದು ನೋಡಿದಾಗ ಧನಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ, ಆಕೆ ಖುಷಿಯಾಗಿಯೇ ಇದ್ದಳು, ಬರೀ ೨೫ ವರ್ಷ ಇಷ್ಟು ದೊಡ್ಡ ನಿರ್ಧಾರ ಕೈಗೊಂಡಿದ್ದು ಏಕೆ? ಎಂದು ಹೆತ್ತವರು ಕಣ್ಣೀರಿಟ್ಟಿದ್ದಾರೆ.