ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ಧರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫೆಬ್ರವರಿ 29 ರಂದು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bangalore Chirotsava) ಬೆಂಗಳೂರಿನಲ್ಲಿ ನಡೆಯಲಿದೆ. ಈ ಚಿತ್ರೋತ್ಸವದ ಲೋಗೋವನ್ನು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಅನಾವರಣ ಮಾಡಿದರು.

ಉತ್ಸವದ ಉದ್ಘಾಟನಾ ಸಮಾರಂಭಫೆಬ್ರವರಿ 29 ರಂದು ವಿಧಾನಸೌಧದ ಮುಂಭಾಗ ನಡೆಯಲಿದ್ದು, ಮಾರ್ಚ್ 7ರಂದು ಸಮಾರೋಪ ಸಮಾರಂಭ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ.

15 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಈ ಬಾರಿ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಚಲನಚಿತ್ರ ಸಂಘಟನೆಗಳ ಅಂತಾರಾಷ್ಟ್ರೀಯ ಮಹಾ ಒಕ್ಕೂಟ (FIAPF) ಮಾನ್ಯತೆ ಪಡೆದ ಈ ಚಲನಚಿತ್ರೋತ್ಸವ, ರಾಷ್ಟ್ರೀಯ ಚಲನಚಿತ್ರ ಪ್ರತಿನಿಧಿಗಳು, ಚಲನಚಿತ್ರ ನಿರ್ಮಾಪಕರು, ಕಲಾವಿದರು, ನಿರ್ದೇಶಕರು, ತಂತ್ರಜ್ಞರು ಮತ್ತಿತರ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಿಯಾನ್ ಮಾಲ್ ನ ಪಿವಿಆರ್ ಸಿನಿಮಾದ 11 ಪರದೆಗಳು, ಚಾಮರಾಜ ಪೇಟೆಯಲ್ಲಿರುವ ರಾಜ್ ಕುಮಾರ್ ಕಲಾ ಭವನ, ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರಾ ಚಿತ್ರಸಮಾಜದಲ್ಲಿ ಪ್ರತಿನಿಧಿಗಳಿಗೆ ಮಾರ್ಚ್ 1 ರಿಂದ ಚಲನಚಿತ್ರ ಪ್ರದರ್ಶನ ಆರಂಭವಾಗಲಿದೆ.ಸುಮಾರು 50ಕ್ಕೂ ಹೆಚ್ಚು ದೇಶಗಳಿಂದ 200ಕ್ಕೂ ಹೆಚ್ಚು ಚಿತ್ರಗಳು ವಿವಿಧ ವಿಭಾಗಗಳಲ್ಲಿ ಪ್ರದರ್ಶನಗೊಳ್ಳಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!