ಕನ್ನಡ ಚಿತ್ರಕ್ಕೆ ಅಂತಾರಾಷ್ಟ್ರೀಯ ಮನ್ನಣೆ: ಏ. 27 ಶ್ರೀಲಂಕಾದಲ್ಲಿ ‘ನಾಗತಿಹಳ್ಳಿ ಚಂದ್ರಶೇಖರ್ ಚಲನಚಿತ್ರೋತ್ಸವ’

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸದ್ಯ ಟೆಂಟ್ ಸಿನಿಮಾ ಮೂಲಕ ಹೊಸ ಪ್ರತಿಭೆಗಳಿಗೆ ಅಭಿನಯದ ತರಬೇತಿ ನೀಡುತ್ತಿರುವ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನ ಮಾಡಿರೋ ಚಿತ್ರಗಳಿಗೆ ಅಂತಾರಾಷ್ಟ್ರೀಯ ಮನ್ನಣೆ ಸಿಗುತ್ತಿದೆ.

ಇದೀಗ ಶ್ರೀಲಂಕಾದ ಫಿಲಂ ಕಾರ್ಪೋರೇಶನ್, ಅಲ್ಲಿನ ಪ್ರವಾಸೋದ್ಯಮ ಇಲಾಖೆ, ಏಷ್ಯನ್ ಮೀಡಿಯಂ ಕಲ್ಚರಲ್ ಅಸೋಸಿಯೇಶನ್ ಮತ್ತು ಶ್ರೀಲಂಕಾದ ಭಾರತೀಯ ರಾಯಭಾರಿ ಕಚೇರಿ ಇವುಗಳ ಸಹಯೋಗದಲ್ಲಿ ಏಪ್ರಿಲ್ 27 ರಿಂದ ಮೇ 3 ರವರೆಗೆ ಶ್ರೀಲಂಕಾದಲ್ಲಿ ಅದ್ದೂರಿಯಾದ ನಾಗತಿಹಳ್ಳಿ ಚಂದ್ರಶೇಖರ್ ಚಲನಚಿತ್ರೋತ್ಸವ, ಚಲನಚಿತ್ರ ಕಾರ್ಯಾಗಾರ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿವೆ.

ನಿರ್ದೇಶಕ ಹಾಗೂ ಬರಹಗಾರ ನಾಗತಿಹಳ್ಳಿ ಚಂದ್ರಶೇಖರ್​ ಅವರ ಪ್ರಶಸ್ತಿ ಪುರಸ್ಕೃತ ಹಾಗೂ ಮಹತ್ವದ ಚಿತ್ರಗಳಾದ ಅಮೆರಿಕ ಅಮೆರಿಕ, ಮಾತಾಡ್ ಮಾತಾಡ್ ಮಲ್ಲಿಗೆ, ಕೋಟ್ರೇಶಿ ಕನಸು, ಇಷ್ಟಕಾಮ್ಯ ಚಿತ್ರಗಳು ಅಲ್ಲಿ ಪ್ರದರ್ಶನಗೊಳ್ಳಲಿವೆ. ಕಥಾ ನಿರೂಪಣೆ, ಚಿತ್ರಕಥೆ ರಚನೆ, ಛಾಯಾಗ್ರಹಣ, ಸಂಕಲನ ಮುಂತಾದ ವಿಷಯಗಳ ಬಗ್ಗೆ ಶ್ರೀಲಂಕಾದ ಸಿನಿಮಾಸಕ್ತ ವಿದ್ಯಾರ್ಥಿಗಳೊಂದಿಗೆ ಕಾರ್ಯಾಗಾರವನ್ನು ನಾಗತಿಹಳ್ಳಿ ಚಂದ್ರಶೇಖರ್​ ಅವರು ನಡೆಸಿಕೊಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!