ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕ ಮಕ್ಕಳಿಂದ ಹಿಡಿದು ಮುದುಕರವರೆಗೂ ಎಲ್ಲರೂ ಹುಲಿಯನ್ನು ನೋಡಲು ಬಯಸುತ್ತಾರೆ. ಅದರ ಆಕಾರ, ಬೇಟೆ ಮತ್ತು ಕಾಡಿನಲ್ಲಿ ತಿರುಗುವ ರೀತಿ ಬಹಳ ಆಕರ್ಷಕವಾಗಿದೆ. ಭಾರತದಲ್ಲಿ ಒಟ್ಟು 3,167 ಹುಲಿಗಳಿವೆ. ಇವು ವಿಶ್ವ ಪ್ರವಾಸಿಗರನ್ನೂ ಆಕರ್ಷಿಸುತ್ತವೆ. ನಿಮಗೆ ಹುಲಿಗಳನ್ನು ನೋಡಬೇಕೆನಿಸಿದರೆ ಈ ಸ್ಥಳಗಳಿಗೆ ಭೇಟಿ ಕೊಟ್ಟು ನಿಮ್ಮ ಕನಸನ್ನು ಈಡೇರಿಸಿಕೊಳ್ಳಿ.
- ಕಾರ್ಬೆಟ್ ಹುಲಿ ಸಂರಕ್ಷಿತ ಪ್ರದೇಶ, ಉತ್ತರಾಖಂಡ
- ರಣತಂಬೋರ್ ರಾಷ್ಟ್ರೀಯ ಉದ್ಯಾನವನ, ರಾಜಸ್ಥಾನ
- ಬಾಂಧವಗಢ ರಾಷ್ಟ್ರೀಯ ಉದ್ಯಾನವನ, ಮಧ್ಯಪ್ರದೇಶ
- ಪೆಂಚ್ ರಾಷ್ಟ್ರೀಯ ಉದ್ಯಾನವನ, ಮಧ್ಯಪ್ರದೇಶ
- ಕನ್ಹಾ ರಾಷ್ಟ್ರೀಯ ಉದ್ಯಾನವನ, ಮಧ್ಯಪ್ರದೇಶ
- ಸಾತ್ಪುರ ರಾಷ್ಟ್ರೀಯ ಉದ್ಯಾನವನ, ಮಧ್ಯಪ್ರದೇಶ
- ಪನ್ನಾ ರಾಷ್ಟ್ರೀಯ ಉದ್ಯಾನವನ, ಮಧ್ಯಪ್ರದೇಶ
- ಕಾಜಿರಂಗ ರಾಷ್ಟ್ರೀಯ ಉದ್ಯಾನವನ, ಅಸ್ಸಾಂ
- ಸುಂದರಬನ್ಸ್ ರಾಷ್ಟ್ರೀಯ ಉದ್ಯಾನವನ, ಪಶ್ಚಿಮ ಬಂಗಾಳ
- ನಾಗರಹೊಳೆ ರಾಷ್ಟ್ರೀಯ ಉದ್ಯಾನವನ, ಕರ್ನಾಟಕ
- ಬಂಡೀಪುರ ರಾಷ್ಟ್ರೀಯ ಉದ್ಯಾನವನ, ಕರ್ನಾಟಕ
- ಪೆರಿಯಾರ್ ರಾಷ್ಟ್ರೀಯ ಉದ್ಯಾನವನ, ಕೇರಳ
ಅಂತರಾಷ್ಟ್ರೀಯ ಹುಲಿ ದಿನದ ಸಂದರ್ಭದಲ್ಲಿ, ಖ್ಯಾತ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಒಡಿಶಾದ ಪುರಿ ಬೀಚ್‌ನಲ್ಲಿ ಗಮನಸೆಳೆಯುವ ಹುಲಿಗಳ ಚಿತ್ರ ಬಿಡಿಸಿದ್ದಾರೆ.