spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, September 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಂತಾರಾಜ್ಯ ಪ್ರಯಾಣವನ್ನು ನಿಷೇಧಿಸಿಲ್ಲ, ಆದರೆ ಆರ್ ಟಿ-ಪಿಸಿರ್ ಪರೀಕ್ಷಾ ವರದಿ ಕಡ್ಡಾಯ!

- Advertisement -Nitte

ಹೊಸ ದಿಂಗತ ಆನ್ ಲೈನ್ ಡೆಸ್ಕ್:

ಕರ್ನಾಟಕ ಮತ್ತು ಕೇರಳ ನಡುವೆ ಅಂತಾರಾಜ್ಯ ಪ್ರಯಾಣವನ್ನು ನಿಷೇಧ ಮಾಡಲಾಗಿಲ್ಲ. ಆದರೆ,  ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರು 72 ಗಂಟೆಗಳಿಗಿಂತ ಹಳೆಯದಲ್ಲದ ಆರ್ ಟಿ-ಪಿಸಿರ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಆರೋಗ್ಯ ಇಲಾಖೆ ಹೊರಡಿಸಿದ ಮಾರ್ಗಸೂಚಿ ಸಹಿತ ಟ್ವೀಟ್ ಮಾಡಿರುವ ಅವರು, ಹಾಸ್ಟೆಲ್‌, ಹೋಂ ಸ್ಟೇಗಳು, ಹೋಟೆಲ್‌, ರೆಸಾರ್ಟ್‌ ಸೇರಿದಂತೆ ಕೇರಳದ ವಿವಿಧೆಡೆಯಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ ಪ್ರವೇಶ ನೀಡುವ ಮುನ್ನ ಕೊರೋನಾ ನೆಗೆಟಿವ್ ವರದಿ ಖಾತರಿಪಡಿಸಿಕೊಳ್ಳುವುದು ಕಡ್ಡಾಯ ಎಂದು ಹೇಳಿದ್ದಾರೆ.

ಪ್ರಯಾಣಕ್ಕೂ ಮೊದಲಿನ 72 ಗಂಟೆಗಳ ಅವಧಿಯಲ್ಲಿ ನಡೆಸಲಾದ ಕೋವಿಡ್ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿದ್ದಲ್ಲಿ ಸಮಸ್ಯೆಯಾಗದು ಎಂದು ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss