Tuesday, March 28, 2023

Latest Posts

ಮಹಿಳಾ ದಿನಾಚರಣೆ: ಇಂದು ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಭಾಗವಾಗಿ ‘ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ’ಯು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ.

ಬುಧವಾರ ಮಹಿಳಾ ದಿನದಂದು ಬೆಂಗಳೂರಿನಲ್ಲಿ ಯಾವುದೇ ಬಸ್‌ನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ಘೋಷಿಸಿದೆ. ಸಾಮಾನ್ಯ ಬಸ್‌ಗಳ ಹೊರತಾಗಿ, ನೀವು ನಗರ ಮಿತಿಯಲ್ಲಿ ಪ್ರೀಮಿಯರ್ ಎಸಿ ಬಸ್‌ಗಳಲ್ಲಿಯೂ ಉಚಿತವಾಗಿ ಪ್ರಯಾಣಿಸಬಹುದು. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಜ್ರ ಮತ್ತು ವಾಯು ವಜ್ರ ಸೇವೆಗಳಿಗೂ ಈ ನಿಯಮ ಅನ್ವಯಿಸಲಿದೆ. ಮಹಿಳೆಯರು ಖಾಸಗಿ ಸಾರಿಗೆ ಸೇವೆಯನ್ನು ಬಳಸುವ ಬದಲು ಸಾರ್ವಜನಿಕ ಸಾರಿಗೆ ಸೇವೆಯನ್ನು ಬಳಸಬೇಕೆಂದು ಬಿಎಂಟಿಸಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮಾರ್ಚ್ 7ರ ಮಧ್ಯರಾತ್ರಿ 12 ಗಂಟೆಯಿಂದ ಮಾರ್ಚ್ 8ರ ಮಧ್ಯರಾತ್ರಿ 12 ಗಂಟೆವರೆಗೆ ಮಹಿಳಾ ಪ್ರಯಾಣಿಕರು ಉಚಿತವಾಗಿ ಬಿಬಿಎಂಟಿಸಿ ಬಸ್​​ಗಳಲ್ಲಿ ಪ್ರಯಾಣಿಸಬಹುದು. ವೋಲ್ವೋ, ಎಸಿ ಬಸ್, ವಾಯುವ್ಯ ರಸ್ತೆ ಸಾರಿಗೆ, ಏರ್ಪೋರ್ಟ್ ಬಸ್ ಸೇರಿದಂತೆ ಬಿಎಂಟಿಸಿಯ ಎಲ್ಲ ಮಾದರಿಯ ಬಸ್​​ನಲ್ಲಿ ಉಚಿತವಾಗಿ ಇಂದು ಒಂದು ದಿನ ಮಹಿಳೆಯರು ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಬಿಎಂಟಿಸಿ ರಚನೆಯಾಗಿ 25 ವರ್ಷ ತುಂಬಿದ ಸಂದರ್ಭದಲ್ಲಿ ಕಳೆದ ವರ್ಷ ಆಗಸ್ಟ್ 15ರಂದು ಮಾತ್ರ ಈ ಅವಕಾಶ ಕಲ್ಪಿಸಲಾಗಿತ್ತು. ಈಗ ಮತ್ತೊಮ್ಮೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ. ಮಹಿಳಾ ದಿನಾಚರಣೆಯಂದು ಇದೇ ಪ್ರಥಮ ಬಾರಿಗೆ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಇನ್ನು ಬಸ್‌ಗಳಲ್ಲಿ ಓಡಾಡಲು ಯಾವುದೇ ರೀತಿಯ ಗುರುತಿನ ಚೀಟಿ ಅಗತ್ಯವಿಲ್ಲ. ಇಂದು ಆರಾಮದಾಯವಾಗಿ ಟಿಕೆಟ್‌ ಇಲ್ಲದೆ ಬೆಂಗಳೂರು ನಗರದಲ್ಲಿ ಸಂಚರಿಸಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!