ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಜೂನ್ 15ರ ವರೆಗೆ ರಾಜ್ಯದಲ್ಲಿ ಇಂಟರ್ನೆಟ್ ಸೇವೆ ಬಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ರಾಜ್ಯದಲ್ಲಿ ಜೂನ್ 15ರ ವರೆಗೆ ಸರ್ಕಾರವು ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ವಿಸ್ತರಣೆ ಮಾಡಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ, ವದಂತಿಗಳು ಮತ್ತು ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಅಂತರ್ಜಾಲ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಹೇಳಿಕೆ ಪ್ರಕಾರnಜೂನ್ 15 ರಂದು ಮಧ್ಯಾಹ್ನ 3 ಗಂಟೆಯವರೆಗೆ ಇಂಟರ್ನೆಟ್ ನಿಷೇಧ ವಿಸ್ತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!