ಇರಾನ್‌ ನಲ್ಲಿ ತೀವ್ರಗೊಂಡ ಹಿಜಾಬ್‌ ಪ್ರತಿಭಟನೆ: ಇನ್ಸ್ಟಾಗ್ರಾಂ, ವಾಟ್ಸಾಪ್‌ ಗೆ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಇರಾನ್‌ನಲ್ಲಿ ಹಿಜಾಬ್‌ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಅಲ್ಲಿನ ಸರ್ಕಾರ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಇನ್ಸ್ಟಾಗ್ರಾಂ, ವಾಟ್ಸಾಪ್‌ ಮೇಲೆ ನಿಷೇಧ ಹೇರಿದೆ.
ಹಿಜಾಬ್‌ ಸರಿಯಾಗಿ ಧರಿಸದ ಕಾರಣಕ್ಕೆಮಹ್ಸಾ ಅಮಿನಿ ಎಂಬ 22 ವರ್ಷದ ಯುವತಿಯೊಬ್ಬಳು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದು, ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿದೆ.
ಟೆಹ್ರಾನ್ ಮತ್ತು ಇತರ ಇರಾನಿನ ನಗರಗಳಲ್ಲಿ ಪ್ರತಿಭಟನಾಕಾರರು ಗುರುವಾರ ಪೊಲೀಸ್ ಠಾಣೆಗಳು ಮತ್ತು ವಾಹನಗಳನ್ನು ಸುಟ್ಟುಹಾಕಿದ್ದಾರೆ. ಯುವತಿ ಸಾವಿನ ಬಗ್ಗೆ ಸಾರ್ವಜನಿಕ ಆಕ್ರೋಶವು ತಣ್ಣಗಾಗುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.
ಪ್ರತಿಭಟನಾಕಾರರನ್ನು ಹತ್ತಿಕ್ಕಲು ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್, ಟ್ವಿಟರ್, ಟೆಲಿಗ್ರಾಂ, ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳಿಗೆ ಇರಾನ್ನಲ್ಲಿ ಈಗಾಗಲೇ ನಿಷೇಧ ಹೇರಲಾಗಿತ್ತು. ಆ ಬಳಿಕ ಪ್ರತಿಭಟನಾಕಾರರು ಸಂದೇಶ ರವಾನೆಗೆ ಇನ್ಸ್ಟಾಗ್ರಾಂ ಹಾಗೂ ವಾಟ್ಸ್ಆ್ಯಪ್ ಅನ್ನು ಬಳಸುತ್ತಿದ್ದರು.
“ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಬೀದಿಗಳಲ್ಲಿ ಸುಳ್ಳು ಸುದ್ದಿ ಮತ್ತು ವದಂತಿಗಳನ್ನು ಹರಡುವ ಮತ್ತು ಸಮಾಜದ ಮಾನಸಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವವರನ್ನು ಗುರುತಿಸಲು ಮತ್ತು ಅವರೊಂದಿಗೆ ನಿರ್ಣಾಯಕವಾಗಿ ವ್ಯವಹರಿಸುವಂತೆ ನಾವು ಸಾಮಾಜಿಕ ತಾಣಗಳನ್ನು ನಿರ್ಬಂಧಿಸಿದ್ದೇವೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!