Wednesday, August 17, 2022

Latest Posts

ಕರ್ನಾಟಕದ ಜಿಲ್ಲೆಗಳ ಅಂತರ್ಜಾಲ ವೇಗ ಹೆಚ್ಚಿಸುವುದಕ್ಕೆ ಕಾರ್ಯಪಡೆ: ಜನಾಶೀರ್ವಾದದ ಬೆನ್ನಲ್ಲೇ ರಾಜೀವ ಚಂದ್ರಶೇಖರ್ ನಡೆ

ಪ್ರೀತಿಯ ಓದುಗರೇ,

ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಂತರ್ಜಾಲ ಸಂಪರ್ಕವು ಕಳಪೆಯಾಗಿರುವುದನ್ನು ಮನಗಂಡು ಈ ನಿಟ್ಟಿನಲ್ಲಿ ತಾಂತ್ರಿಕ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಸೂಚಿಸುವುದಕ್ಕೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಬುಧವಾರ ಕಾರ್ಯಪಡೆಯೊಂದನ್ನು ರಚಿಸಿದೆ. 

ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ ಚಂದ್ರಶೇಖರ ಅವರು ಇತ್ತೀಚೆಗಷ್ಟೇ ರಾಜ್ಯದಲ್ಲಿ ಜನಾಶೀರ್ವಾದ ಯಾತ್ರೆಯ ಅಂಗವಾಗಿ ಸರಣಿ ಪ್ರವಾಸಗಳನ್ನು ಕೈಗೊಂಡಿದ್ದರು. ಅವರು ಭೇಟಿ ಇತ್ತ ಬಹುತೇಕ ಕಡೆಗಳಲ್ಲಿ ಇಂಟರ್ನೆಟ್ ಸಂಪರ್ಕ ಸರಿಯಿಲ್ಲವೆಂಬ ದೂರುಗಳು ಬಂದಿವೆ. ಈ ಬಗ್ಗೆ ಸಚಿವರು ಕಾರ್ಯಪ್ರವೃತ್ತರಾದ ಪರಿಣಾಮವಾಗಿ ಭಾರತದ ತಂತ್ರಜ್ಞಾನ ಪಾರ್ಕುಗಳು ಹಾಗೂ ನ್ಯಾಷನಲ್ ಇಂಟರ್ನೆಟ್ ಎಕ್ಸಚೆಂಜ್ ಆಫ್ ಇಂಡಿಯಾ ಸಂಸ್ಥೆಯ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆಯೊಂದು ರಚನೆಯಾಗಿದೆ. 

ಕರ್ನಾಟಕದ ಜಿಲ್ಲೆಗಳಲ್ಲಿ ಇಂಟರ್ನೆಟ್ ವೇಗ ಹೆಚ್ಚಿಸುವ ಸಲುವಾಗಿ ಈ ಕಾರ್ಯಪಡೆ ಜನರನ್ನು ಸಂದರ್ಶಿಸಲಿದೆಯಲ್ಲದೇ, ಸಂಪರ್ಕ ವ್ಯವಸ್ಥೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೂ ಸಮಾಲೋಚನೆ ನಡೆಸಿ ಸಚಿವರಿಗೆ ವರದಿ ನೀಡಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!