ದಿಗಂತ ವರದಿ ಹುಬ್ಬಳ್ಳಿ:
ರೈಲ್ವೆ ಸ್ಟೇಷನ್ ಹತ್ತಿರ ಗಾಂಜಾ ಸಾಗಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ 888 ಗ್ರಾಂ ಗಾಂಜಾ, 96.50 ಲಕ್ಷ ರೂ., ಕಾರು ಹಾಗೂ ವಿವಿಧ ಬ್ಯಾಂಕ್ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಜಸ್ಥಾನ ಮೂಲದ ಓಂ ಪ್ರಕಾಶ ಬಂಧಿತ ಆರೋಪಿ. ಖಚಿತ ಮಾಹಿತಿ ಆಧರಿಸಿ ಶಹರ ಪೊಲೀಸ್ ಠಾಣೆಯ ಅಧಿಕಾರಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಪೊಲೀಸ್ ಸ್ಟೇಷನ್ ಹತ್ತಿರ ಬಂಧಿಸಿದಾಗ 245 ಗ್ರಾಂ ಗಾಂಜಾ ದೊರೆಕಿದೆ. ಬಳಿಕ ವಿಚಾರಣೆ ನಡೆಸಿದಾಗ ಮನೆಯಲ್ಲಿ ಗಾಂಜಾ ಇರುವುದು ತಿಳಿಸಿದ್ದು, ಮನೆಗೆ ಭೇಟಿ ನೀಡಿ ಪರಿಶೀಲಿಸಿ 643 ಗಾಂಜಾ ವಶಪಡಿಸಿಕೊಂಡಿದ್ದಾರೆ.
ಆರೋಪಿ 90.50 ಲಕ್ಷ ಹಣ ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಹಣ ಹೂಡಿಕೆ ಜನಸಾಮಾನ್ಯರಿಗೆ ವಂಚಿಸುವ ಉದ್ದೇಶ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.