ಬೆದರಿಸುವುದು ಕಾಂಗ್ರೆಸ್​​ನ ಹಳೇ ಸಂಸ್ಕೃತಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ತರುವ ಪ್ರಯತ್ನಗಳ ಬಗ್ಗೆ ಕಳವಳ ವ್ಯಕ್ತಪಡಿಸಿ 600 ವಕೀಲರು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದ ಬೆನ್ನಲ್ಲೇ, ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸಿದ್ದು, ‘ಬೆದರಿಸುವುದು, ಬೊಬ್ಬೆಹೊಡೆಯುವುದು ಕಾಂಗ್ರೆಸ್ ಸಂಸ್ಕೃತಿ’ ಎಂದು ತಿರುಗೇಟು ನೀಡಿದ್ದಾರೆ.

ಐದು ದಶಕಗಳ ಹಿಂದೆ ಅವರೇ ‘ಬದ್ಧ ನ್ಯಾಯಾಂಗ’ಕ್ಕೆ ಕರೆ ನೀಡಿದ್ದರು. ಅವರು ನಾಚಿಕೆಯಿಲ್ಲದೆ ತಮ್ಮ ಸ್ವಾರ್ಥಕ್ಕಾಗಿ ಇತರರಿಂದ ಬದ್ಧತೆಯನ್ನು ಬಯಸುತ್ತಾರೆ. ಆದರೆ ರಾಷ್ಟ್ರದ ಬಗೆಗಿನ ಯಾವುದೇ ಬದ್ಧತೆಯನ್ನು ಅವರು ತೋರಿಸುವುದಿಲ್ಲ .ಅಚ್ಚರಿಯೇನಿಲ್ಲ, 140 ಕೋಟಿ ಭಾರತೀಯರು ಅವರನ್ನು ತಿರಸ್ಕರಿಸುವುದರಲ್ಲಿ ಆಶ್ಚರ್ಯವಿಲ್ಲ ಎಂದು ಪ್ರಧಾನಿಯವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ವಕೀಲರು ಬರೆದ ಪತ್ರವನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಸೇರಿದಂತೆ ಸುಮಾರು 600 ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ, ‘ಪಟ್ಟಭದ್ರ ಹಿತಾಸಕ್ತಿ ಗುಂಪು’ ವಿಶೇಷ ಪ್ರಕರಣಗಳಲ್ಲಿ ನ್ಯಾಯಾಂಗದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ಇದು ನ್ಯಾಯಾಲಯಗಳಿಗೆ ಮಾನಹಾನಿ ಮಾಡುವುದಾಗಿದೆ ಎಂದು ಆರೋಪಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!