ಮಾರ್ಚ್ 2024ರೊಳಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಪರಿಚಯ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

2024 ರ ಮಾರ್ಚ್ ರೊಳಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಇದರ ಹಿಂದಿನ ಉದ್ದೇಶ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ಜನರು ಪ್ರಯಾಣಿಸಿದ ದೂರಕ್ಕೆ ಮಾತ್ರ ಶುಲ್ಕ ವಿಧಿಸುವುದಾಗಿದೆ ಎಂದು ತಿಳಿಸಿದ್ದಾರೆ .

ದೇಶದಲ್ಲಿ ಟೋಲ್ ಪ್ಲಾಜಾಗಳನ್ನು ಬದಲಿಸಲು ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನಗಳನ್ನು ಸರ್ಕಾರ ಗಮನಿಸಿದೆ.ವಾಹನಗಳನ್ನು ನಿಲ್ಲಿಸದೆ ಸ್ವಯಂಚಾಲಿತ ಟೋಲ್ ಸಂಗ್ರಹವನ್ನು ಸಕ್ರಿಯಗೊಳಿಸಲು ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ವ್ಯವಸ್ಥೆಯ(ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮೆರಾಗಳು) ಎರಡು ಪ್ರಾಯೋಗಿಕ ಯೋಜನೆಗಳನ್ನು ಸರ್ಕಾರ ನಡೆಸಿದೆ ಎಂದು ತಿಳಿಸಿದ್ದಾರೆ.

ಫಾಸ್ಟ್ಯಾಗ್ ವ್ಯವಸ್ಥೆಯನ್ನು ಪರಿಚಯಿಸಿದ ನಂತರ ಟೋಲ್ ಪ್ಲಾಜಾಗಳಲ್ಲಿ ಸರಾಸರಿ ಕಾಯುವ ಸಮಯವು 2018-19ರಲ್ಲಿ 8 ನಿಮಿಷಗಳಿಂದ 2020-21 ಮತ್ತು 2021-22 ರಲ್ಲಿ 47 ಸೆಕೆಂಡುಗಳಿಗೆ ಕಡಿಮೆಯಾಗಿದೆ ಎಂದು ಅವರು ಹೇಳಿದರು.

ಕೆಲವು ಸ್ಥಳಗಳಲ್ಲಿ, ವಿಶೇಷವಾಗಿ ನಗರಗಳ ಸಮೀಪದಲ್ಲಿ, ಜನನಿಬಿಡ ಪಟ್ಟಣಗಳಲ್ಲಿ ಕಾಯುವ ಸಮಯದಲ್ಲಿ ಗಣನೀಯ ಸುಧಾರಣೆ ಕಂಡುಬಂದರೂ, ಪೀಕ್ ಅವರ್‌ಗಳಲ್ಲಿ ಟೋಲ್ ಪ್ಲಾಜಾಗಳಲ್ಲಿ ಇನ್ನೂ ಕೆಲವು ಕಡೆ ವಿಳಂಬ ಆಗುತ್ತದೆ ಇಂಡಿತು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!