ಇನ್ವೆಸ್ಟ್ ಕರ್ನಾಟಕ ಹೂಡಿಕೆದಾರರ ಸಮಾವೇಶ: ವೀಲ್ ಚೇರ್‌ನಲ್ಲೇ ವೇದಿಕೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಅರಮನೆ ಮೈದಾನದಲ್ಲಿ 2025ರ ಇನ್ವೆಸ್ಟ್ ಕರ್ನಾಟಕ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ ನೀಡಲಾಗಿದೆ.

ಈ ಸಮಾವೇಶಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಹಲವಾರು ಗಣ್ಯರು ಭಾಗಿಯಾಗಿದ್ದಾರೆ.

ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ವೀಲ್ ಚೇರ್‌ನಲ್ಲೇ ಆಗಮಿಸಿದರು. ಸಿಎಂಗೆ ಎಡಗಾಲಿನ ಮಂಡಿ ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಹಾಯಕರ ನೆರವಿನೊಂದಿಗೆ ಸಿದ್ದರಾಮಯ್ಯ ವೀಲ್ ಚೇರ್‌ನಲ್ಲೇ ಕಾರ್ಯಕ್ರಮಕ್ಕೆ ಬಂದರು.

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಎಡಗಾಲಿನ ಮಂಡಿ ನೋವಿನ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದಿದ್ದರು. ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯರ ತಪಾಸಣೆ ನಡೆಸಿ ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದಿದೆ. ಅದೇ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ಮಂಡಿ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ಮಣಿಪಾಲ್ ವೈದ್ಯರು ತಿಳಿಸಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!