50,000 ಕೋಟಿ ರುಪಾಯಿಗಳ ಹೂಡಿಕೆ ಘೋಷಣೆ- ದಾವೋಸ್ ಕೂಟದಲ್ಲಿ ಕರ್ನಾಟಕದ ಡಿಂಡಿಮ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ದಾವೋಸ್ ನ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪನಿಯ ಪ್ರತಿನಿಧಿಗಳು ರಾಜ್ಯ ಸರ್ಕಾರದೊಂದಿಗೆ ₹50,000 ಕೋಟಿ ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದು ನವೀಕರಿಸಬಹುದಾದ ಇಂಧನ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿದೆ.
ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹಾಗೂ ಐಟಿ-ಬಿಟಿ ಸಚಿವ ಅಶ್ವತ್ಥನಾರಾಯಣ ಹಾಜರಿದ್ದರು.
ಈ 50,00 ಕೋಟಿ ರುಪಾಯಿಗಳ ಮೊತ್ತವನ್ನು ಮುಂದಿನ ಏಳು ವರ್ಷಗಳಲ್ಲಿ ಕಂಪನಿಯು ಕರ್ನಾಟಕದಲ್ಲಿ ಹೂಡಲಿದ್ದು, ಇದರಿಂದ 30,000 ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ.
ಅಂತೆಯೇ ಭಾರತಿ ಉದ್ದಿಮೆ ಕರ್ನಾಟಕದಲ್ಲಿ ಡೇಟಾ ಕೇಂದ್ರವನ್ನು ಸ್ಥಾಪಿಸುವುದಕ್ಕೆ ಒಪ್ಪಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವೋಸ್ ನಲ್ಲಿ ಸುನಿಲ್ ಭಾರ್ತಿ ಮಿತ್ತಲ್ ಅವರೊಂದಿಗೆ ಚರ್ಚಿಸಿದ ನಂತರ ಟ್ವಿಟ್ಟರಿನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ದಾವೋಸ್ ಶೃಂಗದಲ್ಲಿ ಖ್ಯಾತ ಉದ್ಯಮಿ ಗೌತಮ್ ಅದಾನಿ ಜತೆಗೂ ಸೌಹಾರ್ದ ಭೇಟಿಯಾಗಿದ್ದು ಅವರೂ ಸಹ ಕರ್ನಾಟಕದಲ್ಲಿ ಹೂಡಿಕೆ ಸಾಧ್ಯತೆಗಳ ಬಗ್ಗೆ ಯೋಚಿಸುವುದಾಗಿ ಭರವಸೆ ಇತ್ತಿರುವುದಾಗಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!