ಪ್ರವಾಸೋದ್ಯಮ ವಲಯದಲ್ಲಿ 8,000 ಕೋಟಿ ರೂ.ಹೂಡಿಕೆ, 1.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

2024-29ರ ಕರ್ನಾಟಕ ಪ್ರವಾಸೋದ್ಯಮ ನೀತಿ ಕಾರ್ಯಗತಗೊಳಿಸಲು 1,350 ಕೋಟಿ ರೂ.ಗಳ ಒದಗಿಸಲಾಗಿದ್ದು, ಈ ನೀತಿಯ ಮೂಲಕ 8,000 ಕೋಟಿ ನೇರ ಹೂಡಿಕೆ ಆಕರ್ಷಿಸಲು ಮತ್ತು 1.5 ಲಕ್ಷ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಪ್ರವಾಸೋದ್ಯಮದಲ್ಲಿ ಜಾಗತಿಕವಾಗಿ ಕರ್ನಾಟಕ ಗುರುತಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ. ಕರ್ನಾಟಕವನ್ನು ಪ್ರವಾಸೋದ್ಯಮದಲ್ಲಿ ಜಾಗತಿಕವಾಗಿ ಗುರುತಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿವಿಧತೆಯಲ್ಲಿ ಏಕತೆ ಎಂಬಂತೆ ರಾಜ್ಯ ಎಲ್ಲಾ ರೀತಿಯ ಪ್ರವಾಸಿ ತಾಣಗಳನ್ನು ಹೊಂದಿದೆ, ಹಲವು ಜಗತ್ತು ಒಂದು ರಾಜ್ಯ ನಮ್ಮದು ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದು ಹೇಳಿದರು.

ಕರ್ನಾಟಕದ ಕಾಡುಗಳು, ಐತಿಹಾಸಿಕ ತಾಣಗಳು, ಸಂಸ್ಕೃತಿ, ಕಲೆ, ಜನಪದ ಹೀಗೆ ರಾಜ್ಯದ ಪ್ರತಿಮೂಲೆ ಸಹ ಪ್ರವಾಸಿ ತಾಣವಾಗಿದೆ. ವಿಮಾನಯಾನ, ರಸ್ತೆ, ರೈಲು ಸೇರಿದಂತೆ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವ ಮೂಲಕ ಪ್ರವಾಸಿತಾಣಗಳ ಅಭಿವೃದ್ಧಿಗಾಗಿ ಕ್ರಮಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯಕ್ಕೆ ಜಾಗತಿಕವಾಗಿ ಪ್ರವಾಸಿಗಳನ್ನು ಸೆಳೆಯಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಮ್ಮ ರಾಜ್ಯವು 4 ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳು, 35ಕ್ಕೂ ಹೆಚ್ಚು ರಾಷ್ಟ್ರೀಯ ಉದ್ಯಾನವನಗಳು ಮತ್ತು ವನ್ಯಜೀವಿ ಅಭಯಾರಣ್ಯಗಳು, ಪ್ರಾಚೀನ ಗಿರಿಧಾಮಗಳು, ಆಧ್ಯಾತ್ಮಿಕ ಕೇಂದ್ರಗಳು, ಸಾಹಸ ತಾಣಗಳು ಮತ್ತು ದೇಶದ ಕೆಲವು ಅತ್ಯುತ್ತಮ ಸ್ವಾಸ್ಥ್ಯ ಹಿಮ್ಮೆಟ್ಟುವಿಕೆಗಳಿಗೆ ನೆಲೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!