ಹೊಸದಿಗಂತ ವರದಿ ಕಲಬುರಗಿ:
ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ಜನೇವರಿ ೨೨ರಂದು ಪ್ರಭು ಶ್ರೀ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಆಗಲಿದ್ದು,ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರದ ಐತಿಹಾಸಿಕ ಶ್ರೀ ಶರಣಬಸವೇಶ್ವರ ಮಹಾ ಸಂಸ್ಥಾನಕ್ಕೆ ಆಹ್ವಾನ ನೀಡಲಾಗಿದೆ.
ಜನೇವರಿ 22 ರಂದು ನಡೆಯಲಿರುವ ರಾಮಲಲಾ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ಶರಣಬಸವೇಶ್ವರ ಸಂಸ್ಥಾನದ ಕಾರ್ಯದರ್ಶಿಯಾಗಿರುವ ಬಸವರಾಜ ದೇಶಮುಖ ಅವರಿಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಪ್ರಚಾರ ವಿಭಾಗದ ಪ್ರಮುಖರಾದ ಕೃಷ್ಣ ಜೋಶಿ ಆಮಂತ್ರಿಸಿದರು.
ಈ ಸಂದರ್ಭದಲ್ಲಿ ಸೇವಾ ಭಾರತಿ ಕೇಂದ್ರದ ಅಧ್ಯಕ್ಷ ರಮೇಶ ತಿಪನೂರ್, ಭೀಮಾಶಂಕರ ಸೇರಿದಂತೆ ವಿವಿಧ ಸ್ಥರದ ಪ್ರಮುಖರು ಉಪಸ್ಥಿತರಿದ್ದರು.