ಹೊಸದಿಗಂತ ಡಿಜಿಟಲ್ ಡೆಸ್ಕ್:
ನನಗೆ ಇಲ್ಲಿಯ ತನಕ ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆಯ ಆಹ್ವಾನ ಬಂದಿಲ್ಲ, ಆಹ್ವಾನ ಬಂದರೆ ಖಂಡಿತಾ ಭಾಗವಹಿಸುವೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಳ, ಗುರುದ್ವಾರ ಸಹಿತ ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ನಾನು ಭೇಟಿ ನೀಡುತ್ತೇನೆ. ನಾನೊಬ್ಬ ಆಸ್ತಿಕ ಎಂದು ಹೇಳಿದ್ದಾರೆ.
ಇ.ಡಿ ಸಮನ್ಸ್ ಜಾರಿ ಮಾಡಿರುವ ಕುರಿತಾದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸತ್ಯವನ್ನು ಅಡಗಿಸಲು ಯಾರಿಗೂ ಸಾಧ್ಯವಿಲ್ಲ. ಇಡೀ ದೇಶವೇ ನೋಡುತ್ತಿದೆ. ನನಗೆ ಹೇಳಲು ಬೇರೆ ಏನೂ ಇಲ್ಲ ಎಂದು ಪ್ರತಿಕ್ರಿಯಿಸಿದರು.