ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯಲ್ಲಿ ವಿಪಕ್ಷ ನಾಯಕ ಯಾರು ಎನ್ನುವ ಪ್ರಶ್ನೆಗೆ ಈವರೆಗೂ ಉತ್ತರ ಸಿಕ್ಕಿಲ್ಲ, ಇದೇ ವಿಷಯವಾಗಿ ಕಾಂಗ್ರೆಸ್ ಬಿಜೆಪಿಯ ಕಾಲು ಎಳೆಯುತ್ತಲೇ ಇದೆ, ಅಂತೆಯೇ ಇದೀಗ ಟ್ವಿಟರ್‌ನಲ್ಲಿ ಪೋಸ್ಟ್ ಒಂದನ್ನು ಕಾಂಗ್ರೆಸ್ ಹಾಕಿದ್ದು, ಎಲ್ಲೆಡೆ ವೈರಲ್ ಆಗಿದೆ.
ತುರ್ತಾಗಿ ಬೇಕಾಗಿದ್ದಾರೆ, ಖಾಲಿ ಇರುವ ಕರ್ನಾಟಕದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹುದ್ದೆಗೆ ಸೂಕ್ತ ವ್ಯಕ್ತಿ ಬೇಕಾಗಿದ್ದಾರೆ. ಇವರು ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಪದವಿ ಪಡೆದವರಾಗಿರಬಾರದು, ಸಂವಿಧಾನ ಹಾಗೂ ಪ್ರಜಾಪ್ರಭುತ್ವಗಳ ಮೌಲ್ಯ ತಿಳಿದಿರಬೇಕು, ಸುಳ್ಳು ಹೇಳಬಾರದು, ಭ್ರಷ್ಟಾಚಾರ ಮಾಡಿರಬಾರದು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಟೀಕಿಸಿದ್ದಾರೆ.