ಭಾರತ್ ಜೋಡೋ ಯಾತ್ರೆಗೆ ಆಹ್ವಾನ: ರಾಹುಲ್ ಗಾಂಧಿಗೆ ಧನ್ಯವಾದ ತಿಳಿಸಿದ ಮಾಯಾವತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವಂತೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರಿಗೆಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಹ್ವಾನ ನೀಡಿದ್ದು, ಇದರ ಪ್ರತಿಯಾಗಿ ಧನ್ಯವಾದ ಅರ್ಪಿಸಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಬಿಎಸ್ಪಿ ಮುಖ್ಯಸ್ಥೆ, ‘ಭಾರತ್ ಜೋಡೋ ಯಾತ್ರೆಗೆ ಶುಭಾಶಯಗಳು ಮತ್ತು ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ನನಗೆ ಪತ್ರ ಬರೆದಿದ್ದಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.
ಆದರೆ, ಮಾಯಾವತಿ ಅವರು ಯಾತ್ರೆಯಲ್ಲಿ ಭಾಗವಹಿಸುತ್ತಾರೆಯೇ ಅಥವಾ ಇಲ್ಲವೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಪ್ರಸ್ತುತ ಯಾತ್ರೆ ಚಳಿಗಾಲದ ವಿರಾಮದಲ್ಲಿದೆ ಮತ್ತು ಜನವರಿ 3 ರಂದು ಪುನರಾರಂಭಗೊಳ್ಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!