ಪ್ರತಿಮೆ ಅನಾವರಣಕ್ಕೆ ದೇವೇಗೌಡರಿಗೆ ಆಹ್ವಾನ: ಜೆಡಿಎಸ್ ಆರೋಪಕ್ಕೆ ಬಿಜೆಪಿ ಪ್ರತಿಕ್ರಿಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬೆಂಗಳೂರಿನ ನಿರ್ಮಾರ್ತೃ ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಹ್ವಾನ ಮಾಡಿಲ್ಲವೆಂದು ಜೆಡಿಎಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಬಿಜೆಪಿ ಸಾಕ್ಷಿ ಸಮೇತ ತಿರುಗೇಟು ನೀಡಿದೆ.

ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣಕ್ಕೆ ದೇವೇಗೌಡರನ್ನು ಕರೆದಿರುವ ಕುರಿತು ಅಹ್ವಾನ ಪತ್ರಿಕೆ ಸಮೇತ ಟ್ವಿಟ್ ಮಾಡಿರುವ ಬಿಜೆಪಿ, ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಶ್ರೀ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಮುಖ್ಯಮಂತ್ರಿ ಬೊಮ್ಮಾಯಿ ಅವರೇ ದೂರವಾಣಿ‌ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ಟೀಕಿಸಿದೆ.

ಮುಂದುವರಿದು ಜೆಡಿಎಸ್ ವಿರುದ್ಧ ಮಾತನಾಡಿದ ಬಿಜೆಪಿ, ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ‌ ಸಲ್ಲಿಸಿದ ಸಾಧಕರಾದಿಯಾಗಿ ನಮ್ಮ ರಾಜ್ಯದ ಕಟ್ಟ ಕಡೆಯಲ್ಲಿರುವವರನ್ನೂ ಮರೆಯದೇ, ಹಿಂಬಾಲಿಸಿ ಗುರುತಿಸಿದ್ದು ಬಿಜೆಪಿ. ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್‌ಗೆ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು ಎಂದು ತಿರುಗೇಟು ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!