ಬಿಜೆಪಿ ಸೇರ್ಪಡೆಗೆ ಆಹ್ವಾನ: ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರ ಎಂದ ಸುಮಲತಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ರಾಜ್ಯಾಧಕ್ಷ ವಿಜಯೇಂದ್ರ (BY Vijayendra) ಮತ್ತು ಪ್ರೀತಂ ಗೌಡ (Pretham Gowda) ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಬೇಕು ಎಂದು ಮನವಿ ಮಾಡಿದ್ದು , ಶನಿವಾರ ಬೆಂಬಲಿಗರ ಸಭೆ ಕರೆದು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಸುಮಲತಾ ಅಂಬರೀಶ್‌ (Sumalatha Ambareesh) ಹೇಳಿದ್ದಾರೆ.

ಭೇಟಿಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ, ವಿಜಯೇಂದ್ರ, ಪ್ರೀತಂಗೌಡ ಒಂದು ಗಂಟೆಗಳ ಕಾಲ ಬಂದು ಮಾತನಾಡಿ ಅವರ ಭಾವನೆಯನ್ನು ಹೇಳಿ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ಕೇಳಿದರು. ನಾಳೆ ಬೆಂಬಲಿಗರು ಬರುತ್ತಿದ್ದಾರೆ. ಅವರ ಭಾವನೆಯನ್ನು ಕೇಳಬೇಕಾದ ಕರ್ತವ್ಯವಿದೆ. ನಾನು ಕಾರ್ಯಕರ್ತರ ಭಾವನೆ ಕೇಳಿ ಮಂಡ್ಯದಲ್ಲಿ ನಿಲುವನ್ನು ತಿಳಿಸುತ್ತೇನೆ ಎಂದರು.

ಬಿಜೆಪಿಯನ್ನು ಬೆಂಬಲಿಸಬೇಕು ಎನ್ನುವುದು ಒಂದು ಕಡೆ. ಬೆಂಬಲಿಗರು ಏನು ಹೇಳುತ್ತಾರೆ ಎನ್ನುವುದನ್ನು ಕೇಳಬೇಕು. ಮಂಡ್ಯಗೆ (Mandya) ಹೋಗಿ ಅವರ ಮುಂದೆಯೇ ನಿಲುವನ್ನು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದರು.

ಸುಲಭವಾಗಿ ಗೆಲ್ಲುವ ಕ್ಷೇತ್ರದ ಆಫರ್ ಇತ್ತು. ಬೇರೆ ಪಕ್ಷದಿಂದಲೂ ಆಫರ್ ಇತ್ತು. ಆದರೆ ನಾನು ಮಂಡ್ಯ ಬಿಟ್ಟರೇ ಮತ್ತೆಲ್ಲೂ ಹೋಗುತ್ತಿಲ್ಲ. ನನ್ನ ಅಸ್ತಿತ್ವ ಅಂದ್ರೆ ಮಂಡ್ಯ. ಅದನ್ನು ಕಳೆದುಕೊಳ್ಳಲು ಇಷ್ಟವಿಲ್ಲ. ಕುಮಾರಸ್ವಾಮಿ ಅವರಿಗೆ ಟಿಕೆಟ್‌ ನೀಡಿದ್ದಕ್ಕೆ ಮಾತನಾಡುವುದಿಲ್ಲ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!