Tuesday, February 27, 2024

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಆಮಂತ್ರಣ

ಹೊಸದಿಗಂತ ವರದಿ ಬೆಳಗಾವಿ :

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮನೆಗೆ ತೆರಳಿದ ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರು ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಆಗಮಿಸುವಂತೆ ಗುರುವಾರ ಆಮಂತ್ರಣ ನೀಡಿದರು.

ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅಕ್ಷತಾ ಅಭಿಯಾನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪ್ರಮುಖರು ಸಚಿವರನ್ನು ಭೇಟಿಯಾಗಿ ಆಮಂತ್ರಣ ನೀಡಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಾದ ಪರಮೇಶ್ವರ ಹೆಗಡೆ, ಶ್ರೀಕಾಂತ ಕದಂ, ಆನಂದ ಬುಕ್ಕೆಬಾಗ್, ಗುರುದತ್ತ ಕುಲಕರ್ಣಿ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!