ಶೃಂಗೇರಿ ಜಗದ್ಗುರುಗಳಿಗೆ ಶ್ರೀರಾಮ ಮಂದಿರ ಉದ್ಘಾಟನೆಯ ಆಹ್ವಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಡೀ ದೇಶವೇ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ಕೆ ಎದುರು ನೋಡುತ್ತಿದೆ. ಈಗಾಗಲೇ ಉತ್ತರ ಪ್ರದೇಶದಲ್ಲಿ ಸಾಕಷ್ಟು ಸಿದ್ಧತೆ ನಡೆದಿದ್ದು, ಶೀಘ್ರವೇ ರಾಮಲಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ.

ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುವ ಕಾರ್ಯ ಆರಂಭವಾಗಿದ್ದು, ಶೃಂಗೇರಿಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳಿಗೆ ಆಹ್ವಾನ ನೀಡಲಾಗಿದೆ.

ಜನವರಿ 22 ರಂದು ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ವೇಳೆ ಎಲ್ಲರೂ ಶ್ರೀರಾಮತಾರಕ ಮಂತ್ರವನ್ನು ಜಪಿಸಿ ದೀಪ ಬೆಳಗಿ ಎಂದು ಗುರುಗಳು ಕರೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!