spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 26, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸ್ವಾತಂತ್ರ್ಯ ದಿನದ ಕಾರ್ಯಕ್ರಮಕ್ಕೆ ಕೋವಿಡ್ ವಾರಿಯರ್​ಗಳನ್ನು ಆಹ್ವಾನಿಸಿ: ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಗಳಿಗೆ ಕೋವಿಡ್ ವಾರಿಯರ್​ಗಳನ್ನು ಆಹ್ವಾನಿಸಬೇಕೆಂದು ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ.
ವೈದ್ಯರು, ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕೆಲಸಗಾರರು ಹಾಗೂ ಕೋವಿಡ್​​ನಿಂದ ಚೇತರಿಕೆ ಕಂಡವರನ್ನು ರಾಜ್ಯ, ಜಿಲ್ಲಾ, ಬ್ಲಾಕ್ ಮತ್ತು ಪಂಚಾಯತ್​ ಮಟ್ಟದ ಸ್ವಾತಂತ್ರ್ಯ ದಿನದ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಹೇಳಿದೆ.
ಕೇಂದ್ರ ಸರ್ಕಾರವು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೋವಿಡ್ ವಾರಿಯರ್ಸ್​ ಅನ್ನು ಗೌರವಿಸಲು ಸೂಚಿಸಿದೆ. ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ದೇಶಭಕ್ತಿಯ ಅಥವಾ ರಾಷ್ಟ್ರೀಯ ಏಕೀಕರಣದ ಸಂದೇಶಗಳನ್ನು ಅಥವಾ ಹಾಡುಗಳನ್ನು ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರ ಮಾಡುವುದು ಅಥವಾ ಪ್ರಮುಖ ಸಾರ್ವಜನಿಕ ಕಟ್ಟಡಗಳನ್ನು ಬೆಳಗಿಸುವುದು ಮುಂತಾದ ಕೆಲಸಗಳನ್ನು ಮಾಡಬಹುದು ಎಂದು ಉಲ್ಲೇಖಿಸಲಾಗಿದೆ.
ಕೊರೋನಾ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಸರಿಯಾದ ನೈರ್ಮಲ್ಯೀಕರಣ, ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯ ಎಂದು ಗೃಹ ಸಚಿವಾಲಯ ಹೇಳಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss