ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ) ನಲ್ಲಿ 66 ತಜ್ಞ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಬಿ.ಇ/ಬಿ.ಟೆಕ್, ಎಂಬಿಎ, ಎಂಸಿಎ, ಸ್ನಾತಕೋತ್ತರ ಪದವಿ, ಎಲ್ಎಲ್ಬಿ, ಸಿಎ/ಐಸಿಡಬ್ಲ್ಯೂಎ, ಎಂ.ಟೆಕ್ ವಿದ್ಯಾರ್ಹತೆ ಜೊತೆಗೆ ಕನಿಷ್ಟ 25 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,170/- ರಿಂದ 89,890/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ನವೆಂಬರ್ 19,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.