ಐಪಿಎಲ್ ಮೊದಲ ಪಂದ್ಯ ಶುರು: ಸಿಎಸ್‌ಕೆ ವಿರುದ್ದ ಟಾಸ್ ಗೆದ್ದ ಗುಜರಾತ್ ಬೌಲಿಂಗ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಐಪಿಎಲ್ ಟೂರ್ನಿ ಗೆ ಅದ್ದೂರಿ ಚಾಲನೆ ಸಿಕ್ಕಿದ್ದು, ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್- ಚೆನ್ನೈ ಮುಖಾಮುಖಿಯಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಕೊರೋನಾ ಕಾರಣದಿಂದ ಭಾರತದಲ್ಲಿ ಐಪಿಎಲ್ ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದ ಅಭಿಮಾನಿಗಳು ಇದೀಗ ರೋಚಕ ಹೋರಾಟಕ್ಕಾಗಿ ಅಹಮ್ಮಾದಾಬಾದ್ ಕ್ರೀಡಾಂಗಣದಲ್ಲಿ ಸಾಕ್ಷಿಯಾಗಿದ್ದಾರೆ.

ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ 16 ವಿಕೆಟ್‌ ಕಿತ್ತಿದ್ದ ಎಡಗೈ ವೇಗಿ ಮುಕೇಶ್‌ ಚೌಧರಿ ಗಾಯದ ಸಮಸ್ಯೆಯಿಂದಾಗಿ 16ನೇ ಆವೃತ್ತಿಯ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಅವರ ಬದಲು ರಾಜಸ್ಥಾನದ ಯುವ ವೇಗಿ ಆಕಾಶ್‌ ಸಿಂಗ್‌ ಚೆನ್ನೈ ಸೂಪರ್‌ಕಿಂಗ್‌್ಸ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!