ಹೊಸದಿಗಂತ ಡಿಜಿಟಲ್ ಡೆಸ್ಕ್
ಐಪಿಎಲ್ ಪ್ರೇಮಿಗಳಿಗೆ ಇಂದು ಸೂಪರ್ ಸಂಡೆ. ಇಂದು ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸೆಣಸಾಟ ನಡೆಸಲಿವೆ.
ಮುಂಬೈ ನ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದ ಟಾಸ್ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು ಟಾಸ್ ಗೆದ್ದಿರುವ ಕೊಲ್ಕತ್ತಾ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಡೆಲ್ಲಿ ಆರಂಭಿಕ ಜೋಡಿಯಾದ ಡೇವಿಡ್ ವಾರ್ನರ್ ಹಾಗೂ ಪೃಥ್ವಿ ಷಾ ಅಂಕಣಕ್ಕಿಳಿಯಲು ಸಜ್ಜಾಗಿದ್ದಾರೆ.
ಕೊಲ್ಕತ್ತಾ ತಂಡದಲ್ಲಿ ಈ ಪಂದ್ಯಕ್ಕೆ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಡೆಲ್ಲಿ ತಂಡದಿಂದ ಬೌಲರ್ ಎನ್ರಿಚ್ ನೋಕಿಯೇ ಅವರನ್ನು ಕೈಬಿಟ್ಟಿದ್ದು, ಖಲೀಲ್ ಅಹಮದ್ ಗೆ ಸ್ಥಾನ ಕಲ್ಪಿಸಲಾಗಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ ಇಲವೆನ್:
ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ಕ್ಯಾ), ಸ್ಯಾಮ್ ಬಿಲ್ಲಿಂಗ್ಸ್ (ವಿ.ಕೀ), ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಸಲಾಂ, ವರುಣ್ ಚಕ್ರವರ್ತಿ.
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ ಇಲವೆನ್:
ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂತ್ (ಕ್ಯಾ &ವಿ.ಕೀ), ರೋವ್ಮನ್ ಪೊವೆಲ್, ಸರ್ಫರಾಜ್ ಖಾನ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್