ಟಾಸ್ ಗೆದ್ದ ಮುಂಬೈ: ಕೋಲ್ಕತ್ತಾ ಬ್ಯಾಟಿಂಗ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್​ ಪ್ರೀಮಿಯರ್ ಲೀಗ್​​ನ 56ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ಹಾಗೂ ಮುಂಬೈ ಇಂಡಿಯನ್ಸ್​ ಮುಖಾಮುಖಿಯಾಗಿವೆ. ಇಂದಿನ ಪಂದ್ಯದಲ್ಲಿ ಟಾಸ್​ ಗೆದ್ದಿರುವ ರೋಹಿತ್ ಬಳಗ ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡಿದೆ. ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ಪಂದ್ಯ ಆರಂಭಗೊಂಡಿದೆ.
ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನಗಳಲ್ಲಿರುವ ತಂಡಗಳ ನಡುವೆ ಇಂದಿನ ಪಂದ್ಯ ನಡೆಯುತ್ತಿರುವ ಕಾರಣ, ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ಮುಂಬೈ ಪ್ಲೇ-ಆಫ್​ ರೇಸ್​ನಿಂದ ಹೊರಬಿದ್ದಿದ್ದು, ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿ, ಪ್ರತಿಷ್ಠೆ ಉಳಿಸಿಕೊಳ್ಳುವ ತವಕದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!