ಹೊಸದಿಗಂತ ಡಿಜಿಟಲ್ ಡೆಸ್ಕ್:
ಡ್ರಗ್ ಕೇಸ್ ನಲ್ಲಿ ಜೈಲು ಶಿಕ್ಷೆ ಅನುಭವಿಸಿದ ನಂತರ ಇದೇ ಮೊದಲ ಬಾರಿಗೆ ನಟ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಐಪಿಎಲ್ ಹಾಜಿನಲ್ಲಿ ಆರ್ಯನ್ ಖಾನ್ ಹಾಗೂ ಸೋದರಿ ಸುಹಾನಾ ಕೂಡ ಕಾಣಿಸಿಕೊಂಡಿದ್ದಾರೆ.
ಐಪಿಎಲ್ ತಂಡಗಳಲ್ಲಿ ಒಂದಾದ ಕೊಲ್ಕತ್ತಾ ನೈಟ್ ರೈಡರ್ಸ್ ಮಾಲೀಕತ್ವ ಹೊಂದಿರುವ ಶಾರುಖ್ ಖಾನ್ ಬಳಿ ಇದ್ದು, ಹರಾಜಿನಲ್ಲಿ ಆರ್ಯನ್ ಖಾನ್ ಕಾಣಿಸಿಕೊಂಡಿದ್ದಾರೆ.
ಐಪಿಎಲ್ ಹರಾಜಿನ ಫೋಟೋ ಹಾಗೂ ವಿಡಿಯೋಗಳು ಎಲ್ಲೆಡೆ ವೈರಲ್ ಆಗುತ್ತಿದ್ದು, ಇದೇ ವೇಳೆ ಜೂಹಿ ಚಾವ್ಲಾ ಕೂಡ ಕೆಕೆಆರ್ ನ ಸಹ ಮಾಲಿಕಿಯಾಗಿದ್ದು, ಆಕೆಯ ಮಗಳು ಜಾನ್ವಿ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ.
ಕಳೆದ ವರ್ಷ ಕ್ರೂಸ್ ಶಿಪ್ ನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದ ಆರೋಪದ ಮೇಲೆ ಒಂದು ತಿಂಗಳು ಆರ್ಯನ್ ಖಾನ್ ಜೈಲಿನಲ್ಲಿದ್ದರು.